ದಾಸಶ್ರೇಷ್ಠ ಕನಕದಾಸರ ಜಯಂತ್ಯೋತ್ಸವ ಆಚರಣೆ

Celebration of Kanakadasara Jayanthi

ಗುಳೇದಗುಡ್ಡ, 15 : ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ನೆಹರು ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗುಳೇದಗುಡ್ಡ ಶಾಲೆಯಲ್ಲಿ ಇಂದು ದಾಸಶ್ರೇಷ್ಠ ಕನಕದಾಸರ ಜಯಂತ್ಯೋತ್ಸವ ಆಚರಣೆ ವಿಜೃಂಭಣೆಯಿಂದ ಮಾಡಲಾಯಿತು.
ದಾಸಶ್ರೇಷ್ಠ ಎನಿಸಿದ ಕನಕದಾಸರ ಭಾವಚಿತ್ರಕ್ಕೆ ಶಾಲೆಯ ಪ್ರಾಚಾರ್ಯರಾದ ಶ್ರೀ ಇ. ಸಾಯಿಕೃಷ್ಣ ಅವರು ಹೂಮಾಲೆಯನ್ನು ಅರ್ಪಿಸಿ ಮಾತನಾಡುತ್ತಾ ‘ದಾಸ ಸಾಹಿತ್ಯದ ಮೂಲಕ ಕನಕದಾಸರು ಸಮಾನತೆ ಸಾರಿದ್ದು, ಈ ಹಿನ್ನೆಲೆಯಲ್ಲಿ ಇಂದಿನ ಪೀಳಿಗೆ ಅವರ ತತ್ತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ವರದಿ:ರವಿಕುಮಾರ್ ಮುರಾಳ