ಶಿಕ್ಷಕರ ಆತ್ಮಹತ್ಯೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಣ್ಣು ತೆರೆಯಲು ಇನ್ನು ಎಷ್ಟು ಜನ ಪ್ರಾಣ ಕಳೆದುಕೊಳ್ಳಬೇಕು; ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಪಿಂಚಣಿಗಾಗಿ ಹೋರಾಟ ನಡೆಸಿದ ಇಬ್ಬರು ಶಿಕ್ಷಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸವರಾಜ ಬೊಮ್ಮಾಯಿ ಕಣ್ಣು ತೆರೆಯಲು ಇನ್ನು ಎಷ್ಟು ಜನ ಪ್ರಾಣ ಕಳೆದುಕೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬೆಂಗಳೂರು (Bengaluru): ಹಳೆಯ ಪಿಂಚಣಿ ಯೋಜನೆಗಾಗಿ ಹೋರಾಟ ನಡೆಸಿದ ಇಬ್ಬರು ಶಿಕ್ಷಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸವರಾಜ ಬೊಮ್ಮಾಯಿ ಕಣ್ಣು ತೆರೆಯಲು ಇನ್ನು ಎಷ್ಟು ಜನ ಪ್ರಾಣ ಕಳೆದುಕೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಹಳೆ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 141 ದಿನಗಳಿಂದ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈವರೆಗೆ 2 ಶಿಕ್ಷಕರು ತಮ್ಮ ಬೇಡಿಕೆ ಈಡೇರಿಕೆಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 141 ದಿನಗಳಿಂದ ನಿರಂತರವಾಗಿ ಈ ಪ್ರತಿಭಟನೆ ನಡೆಯುತ್ತಿದೆ.

ಅವರ ಬೇಡಿಕೆಗಳಿಗೆ ಯಾರೂ ಕಿವಿಗೊಡುತ್ತಿಲ್ಲ. ಶಿಕ್ಷಕರು ಪಿಂಚಣಿ ಕೇಳುತ್ತಿದ್ದಾರೆ. ಅದು ಅವರ ಹಕ್ಕು. ಅವರ ಬೇಡಿಕೆಗಳಿಗೆ ಸರಕಾರ ಕಿವಿಗೊಡಬೇಕಲ್ಲವೇ? ಪಿಂಚಣಿಗಾಗಿ ಪರದಾಡುತ್ತಿರುವ ಶಿಕ್ಷಕರ ಬೇಡಿಕೆಗಳತ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಣ್ಣು ತೆರೆಯುವುದನ್ನು ನೋಡಲು ಇನ್ನು ಎಷ್ಟು ಜನ ಪ್ರಾಣ ಕಳೆದುಕೊಳ್ಳಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಶಿಕ್ಷಕರ ಆತ್ಮಹತ್ಯೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಣ್ಣು ತೆರೆಯಲು ಇನ್ನು ಎಷ್ಟು ಜನ ಪ್ರಾಣ ಕಳೆದುಕೊಳ್ಳಬೇಕು; ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ - Kannada News

ಪರಿಹಾರ ನೀಡಬೇಕು

ಈ ಸರಕಾರ ಹಾಗೂ ಆಡಳಿತಗಾರರ ಕಿವಿಯಲ್ಲಿ ಕಮಿಷನ್ ಸದ್ದು ಮಾತ್ರ ಕೇಳಿ ಬರುತ್ತದೆ. ಮುಖ್ಯವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಡವರ ದನಿ ನಿಮ್ಮ ಕಿವಿಗೆ ಬಿದ್ದಿಲ್ಲವೇ?. ಇನ್ನು ಕೆಲವು ಶಿಕ್ಷಕರು ಪ್ರಾಣ ಕಳೆದುಕೊಳ್ಳುವ ಮುನ್ನ ಸರಕಾರ ಪ್ರತಿಭಟನಾ ನಿರತ ಶಿಕ್ಷಕರನ್ನು ಕರೆಸಿ ಮಾತುಕತೆ ನಡೆಸಬೇಕು. ಸರಕಾರ ಕೂಡಲೇ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಬೇಕು. ಜೀವ ಕಳೆದುಕೊಂಡ 2 ಶಿಕ್ಷಕರ ಕುಟುಂಬಗಳಿಗೆ ಸರಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡುತ್ತೇನೆ ಎಂದು ಹೇಳಿದರು.

2 teachers have committed suicide, Opposition Leader Siddaramaiah has questioned Govt

Follow us On

FaceBook Google News

Advertisement

ಶಿಕ್ಷಕರ ಆತ್ಮಹತ್ಯೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಣ್ಣು ತೆರೆಯಲು ಇನ್ನು ಎಷ್ಟು ಜನ ಪ್ರಾಣ ಕಳೆದುಕೊಳ್ಳಬೇಕು; ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ - Kannada News

2 teachers have committed suicide, Opposition Leader Siddaramaiah has questioned Govt

Read More News Today