ರಾಜ್ಯದಲ್ಲಿ ಮೂರು ವಾರ ಮಧ್ಯಂತರ ರಜೆ, ವಿದ್ಯಾಗಮ ಕಾರ್ಯಕ್ರಮ ಮುಂದೂಡಿಕೆ

3-week Holidays for schools in Karnataka : ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮೂರು ವಾರ ಮಧ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಿದೆ.

ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಅ.12 ರಿಂದ 30 ರವರೆಗೆ ಮಧ್ಯಂತರ ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮೂರು ವಾರ ಮಧ್ಯಂತರ ರಜೆ ಘೋಷಣೆಯಾಗಿದ್ದು, ವಿದ್ಯಾಗಮ ಕಾರ್ಯಕ್ರಮ ಮುಂದೂಡಿಕೆ ಆಗಿದೆ.

( Kannada News ) : ಬೆಂಗಳೂರು: ಕೊರೊನಾ ಅಟ್ಟಹಾಸದ ಹಿನ್ನೆಲೆಯಲ್ಲಿ ಕರ್ನಾಟಕದ ಎಲ್ಲಾ ಶಾಲೆಗಳಿಗೆ ಸರ್ಕಾರ ರಜೆ ಘೋಷಿಸಿದೆ. ಅಕ್ಟೋಬರ್ 12 ರಿಂದ 30 ರವರೆಗೆ ಮೂರು ವಾರಗಳ ರಜೆ ಇರುತ್ತದೆ ಎಂದು ಆದೇಶ ಹೊರಡಿಸಲಾಗಿದೆ. ಶಿಕ್ಷಕರು ಕೊರೊನಾದಿಂದ ಬಳಲುತ್ತಿದ್ದಾರೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಇದನ್ನೂ ಓದಿ : ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜೀನಾಮೆ, ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಒತ್ತಾಯ

ಅನೇಕ ಶಿಕ್ಷಕರು ಕೊರೊನಾದಿಂದ ಬಳಲುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಗಳು ಬಂದವು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಅ.12 ರಿಂದ 30 ರವರೆಗೆ ಮಧ್ಯಂತರ ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ : ಯಡಿಯೂರಪ್ಪ ಸಿಎಂ ಆಗಿ ಅಧಿಕಾರದಲ್ಲಿರಲು ನಾವೇ ಕಾರಣ : ಎಂಟಿಬಿ ನಾಗರಾಜ್

ಶಾಲೆಗಳಿಗೆ ರಜೆ ಘೋಷಿಸುವಂತೆ ಉನ್ನತ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಹೇಳಿದರು. 34 ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎಂಬ ಇತ್ತೀಚಿನ ಸುದ್ದಿಯನ್ನು ಅನುಸರಿಸಿ ವಿದ್ಯಾಗಮ ಎಂಬ ಕಾರ್ಯಕ್ರಮವನ್ನು ಸಹ ಮುಂದೂಡುವುದಾಗಿ ಸರ್ಕಾರ ಪ್ರಕಟಿಸಿದೆ.

Scroll Down To More News Today