ಬೆಂಗಳೂರಿನಲ್ಲಿ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆ, ತಾಯಿಯ ಪ್ರಿಯಕರನಿಂದ ಕೃತ್ಯ
ಬೆಂಗಳೂರಿನಲ್ಲಿ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದ ತಾಯಿಯ ಮಾಜಿ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು (Bengaluru): ಬೆಂಗಳೂರಿನ ಕಾಮಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಕಾವೇರಿಪುರ ಪ್ರದೇಶದಲ್ಲಿ ವಿಚ್ಛೇದಿತ ಮಹಿಳೆಯೊಬ್ಬರು 3 ವರ್ಷದ ಮಗಳೊಂದಿಗೆ ವಾಸಿಸುತ್ತಿದ್ದರು. ಸಿದ್ಧ ಉಡುಪು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಈಕೆಗೆ 26 ವರ್ಷದ ಯುವಕನ ಪರಿಚಯವಾಗಿತ್ತು. ಅಂತಿಮವಾಗಿ ಇಬ್ಬರೂ ಒಂದೇ ಮನೆಯಲ್ಲಿ ವಾಸವಾಗಿದ್ದರು.
ಈ ಸಂದರ್ಭದಲ್ಲಿ ಮಹಿಳೆ ಆ.30ರಂದು ಹೊರಗೆ ಹೋಗಿದ್ದಳು. ಸ್ವಲ್ಪ ಸಮಯದ ನಂತರ ಅಕೆ ಮನೆಗೆ ಹಿಂತಿರುಗಿದಾಗ ಮಗು ಪ್ರಜ್ಞೆ ತಪ್ಪಿತ್ತು. ಇದರಿಂದ ಆಕೆ ಆಘಾತಗೊಂಡಿದ್ದರು.
ಅತ್ಯಾಚಾರ ಮತ್ತು ಕೊಲೆ
ನಂತರ ಮಹಿಳೆ ತನ್ನ ಮಗಳನ್ನು ಎತ್ತಿಕೊಂಡು ವಿಕ್ಟೋರಿಯಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾಳೆ. ಆಕೆಯ ಜೊತೆಗೆ ಆ ಯುವಕ ಸಹ ಹೋಗಿದ್ದ… ನಂತರ ಅಲ್ಲಿ ವೈದ್ಯರು ಮಗುವನ್ನು ಪರೀಕ್ಷಿಸಿದರು. ಮಗು ಅದಾಗಲೇ ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಅಲ್ಲದೇ ಮಗುವಿನ ಮೇಲೆ ಅತ್ಯಾಚಾರ ನಡೆದಿದ್ದು, ಪರಿಣಾಮ ಮಗು ಸಾವನ್ನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಮಧ್ಯೆ, ವೈದ್ಯರು ಮಗು ಸತ್ತಿದೆ ಎಂದು ಘೋಷಿಸುವಷ್ಟರಲ್ಲಿ ಆ ಯುವಕ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ. ಈ ನಡುವೆ ಆತನೇ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಮಗುವಿನ ತಾಯಿ ಕಾಮಕ್ಷಿಪಾಳ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ಅದರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆತನಿಗಾಗಿ ತೀವ್ರ ಶೋಧ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ನಂತರ ಮಗುವಿನ ಮೇಲೆ ಅತ್ಯಾಚಾರ ಮಾಡಿ ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ಕಾಮಕ್ಷಿಪಾಳ್ಯ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
3-year-old girl raped and killed in Bengaluru
Follow us On
Google News |