ಬೆಂಗಳೂರು: ಕರ್ನಾಟಕಕ್ಕೆ ಅಕ್ರಮ ವಲಸೆ, ವೀಸಾ ಅವಧಿ ಮುಗಿದರೂ ಇಲ್ಲೇ ವಾಸ್ತವ್ಯ

ಸುಮಾರು 728 ವಿದೇಶಿಯರು ತಮ್ಮ ವೀಸಾ ಅವಧಿ ಮುಗಿದಿದ್ದರೂ ಕಳೆದ ಮೂರು ವರ್ಷಗಳಿಂದ ಇಲ್ಲಿ ನೆಲೆಸಿದ್ದಾರೆ ಎಂದು ಗೃಹ ಇಲಾಖೆ ಬಹಿರಂಗಪಡಿಸಿದೆ.

ಬೆಂಗಳೂರು (Bengaluru): ಕರ್ನಾಟಕಕ್ಕೆ ವ್ಯಾಸಂಗ ಮತ್ತು ಉದ್ಯೋಗಕ್ಕಾಗಿ ಬರುವ ವಿದೇಶಿಗರು ವೀಸಾ (VISA) ಅವಧಿ ಮುಗಿದರೂ ಅಕ್ರಮವಾಗಿ ಇಲ್ಲಿಯೇ ತಂಗುತ್ತಿದ್ದಾರೆ. ಅಧಿಕೃತ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಒಟ್ಟು 728 ಮಂದಿ ಇದ್ದಾರೆ. ಅವರಲ್ಲಿ ಹೆಚ್ಚಿನವರು ಬೆಂಗಳೂರಿನಲ್ಲಿದ್ದಾರೆ.

ಶಿಕ್ಷಣ, ವ್ಯಾಪಾರ, ವೈದ್ಯಕೀಯ ಹೆಸರಲ್ಲಿ ದೇಶಕ್ಕೆ ಬಂದು ಕರ್ನಾಟಕದಲ್ಲಿ ನೆಲೆಸಿದ್ದಾರೆ. ಕೆಲವರು ಪ್ರವಾಸಿಗರಾಗಿ ಬರುತ್ತಿದ್ದಾರೆ ಎಂಬ ಮಾಹಿತಿ ಬಿಡುಗಡೆಯಾಗಿದೆ.

ಸುಮಾರು 728 ವಿದೇಶಿಯರು ತಮ್ಮ ವೀಸಾ ಅವಧಿ ಮುಗಿದಿದ್ದರೂ ಕಳೆದ ಮೂರು ವರ್ಷಗಳಿಂದ ಇಲ್ಲಿ ನೆಲೆಸಿದ್ದಾರೆ ಎಂದು ಗೃಹ ಇಲಾಖೆ ಬಹಿರಂಗಪಡಿಸಿದೆ.

ಬೆಂಗಳೂರು: ಕರ್ನಾಟಕಕ್ಕೆ ಅಕ್ರಮ ವಲಸೆ, ವೀಸಾ ಅವಧಿ ಮುಗಿದರೂ ಇಲ್ಲೇ ವಾಸ್ತವ್ಯ

ಬಾಂಗ್ಲಾದೇಶೀಯರೂ ಅಕ್ರಮವಾಗಿ ದೇಶದ ಗಡಿ ದಾಟಿ ಕರ್ನಾಟಕಕ್ಕೆ ಬರುತ್ತಿದ್ದಾರೆ. ಬೆಂಗಳೂರಿನ ಜತೆಗೆ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಕೂಲಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದು, ಸ್ಥಳೀಯವಾಗಿ ಆಧಾರ್ ಕಾರ್ಡ್‌ಗಳನ್ನು ಸಹ ಪಡೆಯುವುದು ಗಮನಾರ್ಹವಾಗಿದೆ.

ಬಹುತೇಕರು ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದಾರೆ. ಈ ಅಪರಾಧಗಳಿಗಾಗಿ ಅನೇಕ ಆಫ್ರಿಕನ್ನರನ್ನು ಬಂಧಿಸಲಾಗಿದೆ ಮತ್ತು ಜೈಲಿನಲ್ಲಿ ಇರಿಸಲಾಗಿದೆ. ವೀಸಾ ಅವಧಿ ಮುಗಿದರೂ ರಾಜ್ಯದಲ್ಲಿಯೇ ಇದ್ದು ಅಕ್ರಮ ಎಸಗುತ್ತಿರುವ 227 ವಿದೇಶಿಗರನ್ನು ರಾಜ್ಯದಿಂದ ಗಡಿಪಾರು ಮಾಡಲಾಗಿದೆ.

728 Foreigners Overstay Visa in Karnataka, Many in Bengaluru

Related Stories