ಬೆಂಗಳೂರಿನಲ್ಲಿ 80 ಜನರಿಗೆ ಗಾಯ, ಹಬ್ಬಕ್ಕೆ ಪಟಾಕಿ ಸಿಡಿಸಲು ಹೋಗಿ ಬಾಳು ಕತ್ತಲು
ಬೆಂಗಳೂರು (Bengaluru) : ದೀಪಾವಳಿ ಹಬ್ಬ ಎಲ್ಲರಿಗೂ ಸಂತಸ ತಂದರೂ ಕೆಲವರಿಗೆ ದುಃಖವನ್ನುಂಟು ಮಾಡುತ್ತದೆ. ಹಲವರು ಪಟಾಕಿ ಸ್ಫೋಟದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಟಾಕಿ ಸಿಡಿಸುವುದರಿಂದ ಆಗುವ ಅನಾಹುತಗಳ ಬಗ್ಗೆ ನಗರ ವಾಸಿಗಳಿಗೆ ಎಚ್ಚರಿಕೆ ನೀಡಿದರೂ ಇಂತಹ ಅವಘಡಗಳು ಪ್ರತಿ ವರ್ಷ ನಡೆಯುತ್ತಲೇ ಇವೆ.
80ಕ್ಕೂ ಹೆಚ್ಚು ಮಂದಿ ಕಣ್ಣಿಗೆ ಗಾಯಗಳಾಗಿ ನಗರದ ವಿವಿಧ ಕಣ್ಣಿನ ಆಸ್ಪತ್ರೆಗಳಲ್ಲಿ (Bengaluru Eye Hospital) ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ವರ್ಷದ ದೀಪಾವಳಿಗೆ ಹೋಲಿಸಿದರೆ ಈ ಬಾರಿ ಸಂಖ್ಯೆ ಸಾಕಷ್ಟು ಹೆಚ್ಚಾಗಿದೆ.
ದೃಷ್ಟಿ ಕಳೆದುಕೊಳ್ಳುವ ಅಪಾಯ
● ಹಬ್ಬದ ಎರಡು ದಿನಗಳಲ್ಲಿ 80 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ನಾರಾಯಣ ನೇತ್ರಾಲಯದಲ್ಲಿ 23, ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 22, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 15, ಶೇಖರ್ ನೇತ್ರಾಲಯದಲ್ಲಿ 4 ಹಾಗೂ ಇನ್ನೂ ಕೆಲವು ಗಾಯಾಳುಗಳು ನಗರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
● ಗಾಯಗೊಂಡವರಲ್ಲಿ ಕೆಲವರು ದೃಷ್ಟಿ ಕಳೆದುಕೊಳ್ಳುವ ಅಪಾಯವಿದೆ.
● ಮಕ್ಕಳೊಂದಿಗೆ ಪಟಾಕಿ ಸುಡುವ ವೇಳೆ ಗಾಯಗೊಂಡಿದ್ದ ಅನಂತಪುರ ನಿವಾಸಿ (30) ಅವರನ್ನು ನಗರದ ನಾರಾಯಣ ನೇತ್ರಾಲಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಒಂದು ಕಣ್ಣಿಗೆ ದೃಷ್ಟಿ ಬರುವ ಸಾಧ್ಯತೆ ಕಡಿಮೆ ಎಂದು ಆಸ್ಪತ್ರೆಯ ಅಧ್ಯಕ್ಷ ರೋಹಿತ್‌ಶೆಟ್ಟಿ ತಿಳಿಸಿದ್ದಾರೆ.
● ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 9 ಮಂದಿ ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
80 people were injured while burst firecrackers in Bengaluru
Our Whatsapp Channel is Live Now 👇