ಬೆಂಗಳೂರು: ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ

Story Highlights

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ಹಾಗೂ ನಟ ದರ್ಶನ್ (Actor Darshan) ಜಾಮೀನು ಅರ್ಜಿ ವಿಚಾರಣೆ ಇಂದು ಮತ್ತೆ ನಡೆಯಲಿದೆ.

ಬೆಂಗಳೂರು (Bengaluru): ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ಹಾಗೂ ನಟ ದರ್ಶನ್ (Actor Darshan) ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ (Karnataka High Court) ಮಂಗಳವಾರಕ್ಕೆ ಮುಂದೂಡಿತ್ತು, ಅಂದರೆ ಇಂದು ಅರ್ಜಿ ವಿಚಾರಣೆ ಮತ್ತೆ ನಡೆಯಲಿದೆ.

ಸೋಮವಾರ ನಡೆದ ವಿಚಾರಣೆ ವೇಳೆ ವಕೀಲರ ತಂಡ ವೈದ್ಯಕೀಯ ವರದಿಯನ್ನು ನ್ಯಾಯಾಧೀಶರಾದ ಎಸ್.ವಿಶ್ವಜಿತಶೆಟ್ಟಿ ಅವರಿಗೆ ಹಸ್ತಾಂತರಿಸಿದರು. ದರ್ಶನ್ ಅವರಿಗೆ ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆ, ಆರೋಗ್ಯದ ದೃಷ್ಟಿಯಿಂದ ಅವರಿಗೆ ಜಾಮೀನು ನೀಡಬೇಕಾಗಿ ಮನವಿ ಮಾಡಿದರು.

ಬಳ್ಳಾರಿ ಅಥವಾ ಬೆಂಗಳೂರಿನಲ್ಲಿ (Bengaluru) ಅವರಿಗೆ ಶಸ್ತ್ರಚಿಕಿತ್ಸೆ ನಡೆಸಬೇಕಾಗಬಹುದು ಎಂಬ ಮಾಹಿತಿ ಇದೆ. ಎರಡೂ ವಾದಗಳನ್ನು ಆಲಿಸಿದ ಬಳಿಕ ವಿಚಾರಣೆಯನ್ನು ಮುಂದೂಡಲಾಯಿತು. ಇದರೊಂದಿಗೆ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ, ಇನ್ನು ಪವಿತ್ರಾ ಗೌಡ ಕೂಡ ಜಾಮೀನಿಗೆ ಪ್ರಯತ್ನಿಸುತ್ತಿದ್ದಾರೆ.

Actor Darshan’s bail application hearing today

Related Stories