ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

Karnataka One Franchise: ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹೊಸ ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 2ರೊಳಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ.

  • ಬೆಂಗಳೂರು ನಗರದಲ್ಲಿ ಕರ್ನಾಟಕ ಒನ್ ಕೇಂದ್ರ
  • ಕರ್ನಾಟಕ ಒನ್ ಕೇಂದ್ರ ಸ್ಥಾಪನೆಗೆ ಅವಕಾಶ
  • ಮಾರ್ಚ್ 2ರೊಳಗೆ ಆನ್‌ಲೈನ್ ಅರ್ಜಿ ಕಡ್ಡಾಯ

ಬೆಂಗಳೂರು (Bengaluru): ಬೆಂಗಳೂರು ನಗರ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಾಗರಿಕ ಸೇವೆಗಳನ್ನು ಮತ್ತಷ್ಟು ಸುಲಭಗೊಳಿಸುವ ಉದ್ದೇಶದಿಂದ ಕರ್ನಾಟಕ ಒನ್ ಕೇಂದ್ರಗಳನ್ನು (Karnataka One Franchise) ಸ್ಥಾಪಿಸಲು ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚುವರಿ ಜಿಲ್ಲಾಧಿಕಾರಿಗಳು ಪ್ರಕಟಣೆ ಹೊರಡಿಸಿ, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು ಎಂದು ಸ್ಪಷ್ಟಪಡಿಸಿದ್ದಾರೆ.

ಯಾವ ಪ್ರದೇಶಗಳಲ್ಲಿ ಅವಕಾಶ?

ಆನೇಕಲ್ ತಾಲ್ಲೂಕಿನ ಆನೇಕಲ್, ಅತ್ತಿಬೆಲೆ, ಬೊಮ್ಮಸಂದ್ರ, ಚಂದಾಪುರ, ಜಿಗಣಿ ಮತ್ತು ಹೆಬ್ಬುಗೋಡಿ ಪ್ರದೇಶಗಳಲ್ಲಿ ಕೇಂದ್ರ ಸ್ಥಾಪನೆಗೆ ಅವಕಾಶ ಇದೆ. ಉತ್ತರ ತಾಲ್ಲೂಕಿನ ಚಿಕ್ಕಬಾಣಾವರ ಹಾಗೂ ಮಾದನಾಯಕನಹಳ್ಳಿ, ದಕ್ಷಿಣ ತಾಲ್ಲೂಕಿನ ಕೋನಪ್ಪನ ಅಗ್ರಹಾರ ಮತ್ತು ದೊಡ್ಡತೋಗೂರು ಭಾಗಗಳಲ್ಲಿಯೂ ಅವಕಾಶ ಕಲ್ಪಿಸಲಾಗಿದೆ. ಯಲಹಂಕ ತಾಲ್ಲೂಕಿನ ಹುಣಸಮಾರನಹಳ್ಳಿಯಲ್ಲೂ ಕೇಂದ್ರ ಆರಂಭಿಸಬಹುದಾಗಿದೆ.

ಈ ಕೇಂದ್ರಗಳ ಮೂಲಕ ವಿದ್ಯುತ್ ಬಿಲ್ ಪಾವತಿ, ಪ್ರಮಾಣಪತ್ರಗಳ ಪಡೆಯುವುದು, ವಿವಿಧ ಸರ್ಕಾರೀ ಸೇವೆಗಳ ಅರ್ಜಿ ಸಲ್ಲಿಕೆ ಸೇರಿದಂತೆ ಅನೇಕ ಸೌಲಭ್ಯಗಳನ್ನು ಒಂದೇ ಸ್ಥಳದಲ್ಲಿ ಪಡೆಯುವ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ಅರ್ಜಿ ಸಲ್ಲಿಕೆ ವಿಧಾನ

ಆಸಕ್ತರು https://www.karnatakaone.gov.in/public/franchiseeTerms ವೆಬ್‌ಸೈಟ್‌ಗೆ ಭೇಟಿ ನೀಡಿ ಮಾರ್ಚ್ 2ರೊಳಗೆ ಅರ್ಜಿ ಸಲ್ಲಿಸಬೇಕು. ಆನ್‌ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

ಸರ್ಕಾರಿ ಸೇವೆಗಳನ್ನು ಜನರಿಗೆ ತಲುಪಿಸುವ ಕರ್ನಾಟಕ ಒನ್ ಯೋಜನೆಗೆ ಹೊಸ ಫ್ರಾಂಚೈಸಿ ಅವಕಾಶ ನೀಡಿರುವುದು ಉದ್ಯಮಾಸಕ್ತ ಯುವಕರಿಗೆ ಒಳ್ಳೆಯ ಅವಕಾಶವಾಗಿದೆ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories