ಬೆಂಗಳೂರು ವೈಟ್‌ಫೀಲ್ಡ್‌ನ ಭಾರೀ ಟ್ರಾಫಿಕ್‌ನಲ್ಲಿ ಎ.ಆರ್.ರೆಹಮಾನ್ ಪರದಾಟ
ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಕಾರ್ಯಕ್ರಮ ಮುಗಿಸಿ ತೆರಳುವ ವೇಳೆ ಭಾರಿ ಟ್ರಾಫಿಕ್‌ನಲ್ಲಿ ಸಿಲುಕಿದ್ದು, ಅಭಿಮಾನಿಗಳು ಅವರನ್ನು ನೋಡಿ ಸಂಭ್ರಮಿಸಿದ್ದಾರೆ.

ಬೆಂಗಳೂರು (Bengaluru): ನಗರದ ಟ್ರಾಫಿಕ್‌ನಲ್ಲಿ ಸಾಮಾನ್ಯ ವಾಹನ ಸವಾರರಷ್ಟೇ ಅಲ್ಲ, ಸೆಲೆಬ್ರಿಟಿಗಳೂ ಕೆಲವೊಮ್ಮೆ ಸಿಲುಕಿಕೊಳ್ಳುತ್ತಾರೆ ಎಂಬುದಕ್ಕೆ ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ (A.R.Rahman) ಅವರ ಘಟನೆ ಸಾಕ್ಷಿಯಾಗಿದೆ. ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದ ವೇಳೆ ಅವರು ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಂಡಿದ್ದಾರೆ.
ವೈಟ್‌ಫೀಲ್ಡ್‌ನ ಕೆಟಿಪಿಒ (KTPO) ನಲ್ಲಿ ನಡೆದ ‘ದಿ ವಂಡರ್‌ಮೆಂಟ್ ಟೂರ್’ (The Wonderment Tour) ಸಂಗೀತ ಕಾರ್ಯಕ್ರಮದಲ್ಲಿ ರೆಹಮಾನ್ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಅಲ್ಲಿಂದ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ಭಾರಿ ಟ್ರಾಫಿಕ್ (Traffic) ಉಂಟಾಗಿತ್ತು.
ಇದನ್ನೂ ಓದಿ: ಬೆಂಗಳೂರು ಜಿಮ್ ಟ್ರೈನರ್ ಸಾವು; ನಾಲ್ವರ ವಿರುದ್ಧ ಕೊಲೆ ಪ್ರಕರಣ ದಾಖಲು
ಈ ವೇಳೆ ಕಾರಿನ ಕಿಟಕಿಯಿಂದ ಹೊರಗೆ ನೋಡಿದ ರೆಹಮಾನ್, ಅಲ್ಲಿದ್ದವರತ್ತ ನಗುತ್ತಾ ಕೈಬೀಸಿದ್ದಾರೆ. ಅವರನ್ನು ಗುರುತಿಸಿದ ಅಭಿಮಾನಿಗಳು ಕೂಡಲೇ ತಮ್ಮ ಮೊಬೈಲ್‌ಗಳಲ್ಲಿ ದೃಶ್ಯವನ್ನು ಸೆರೆಹಿಡಿದಿದ್ದಾರೆ.
ರೆಹಮಾನ್ ಅವರನ್ನು ಅಷ್ಟು ಹತ್ತಿರದಿಂದ ನೋಡಿದ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದು, ಈ ಕ್ಷಣದ ವಿಡಿಯೋ (Video) ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಟ್ರಾಫಿಕ್‌ನಲ್ಲಿ ಸಿಲುಕಿದ್ದರೂ ರೆಹಮಾನ್ ಅಭಿಮಾನಿಗಳತ್ತ ನಗುಮುಖದಿಂದ ಪ್ರತಿಕ್ರಿಯಿಸಿರುವುದು ಹಲವರ ಗಮನ ಸೆಳೆದಿದೆ.
ಇದನ್ನೂ ಓದಿ : ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ನಿತ್ಯ ಟ್ರಾಫಿಕ್ ಕಿರಿಕಿರಿ! ಜನ ಹೈರಾಣು
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.



