ಬೆಂಗಳೂರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಎಎಸ್‌ಐ ಹೃದಯಾಘಾತದಿಂದ ನಿಧನ
ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ
ಬೆಂಗಳೂರು (Bengaluru): ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ಕರ್ತವ್ಯ ನಿರತರಾಗಿದ್ದಾಗಲೇ ಕುಸಿದು ಬಿದ್ದಿದ್ದರು. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ.
ಇಡಿ ದಾಳಿಗಳು ರಾಜಕೀಯ ಪ್ರೇರಿತ: ಡಿ.ಕೆ.ಸುರೇಶ್
ಮೈಸೂರಿನ ಮುಡಾ ಕಚೇರಿ ಮೇಲೆ ನಡೆದಿರುವ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು. ಅವರು ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದರು.
ವಿರೋಧ ಪಕ್ಷಗಳ ಮೇಲೆ ಇಂತಹ ದಾಳಿ ಸಾಮಾನ್ಯವಾಗಿದೆ ಎಂದರು. ಮುಡಾ ಪ್ರಕರಣದಲ್ಲಿ ಯಾವುದೇ ಅಕ್ರಮ ಹಣಕಾಸಿನ ವಹಿವಾಟು ನಡೆದಿಲ್ಲ ಎಂದರು. ಕೊನೆಗೆ ಸತ್ಯವೇ ಗೆಲ್ಲುತ್ತದೆ ಎಂದು ಹೇಳಿದರು.
ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದಲೇ ಕೈದಿಯಿಂದ ಫೋನ್ ಮಾಡಿ ಬೆದರಿಕೆ!
ಖಾಸಗಿ ಟೂರಿಸ್ಟ್ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು
ಖಾಸಗಿ ಟೂರಿಸ್ಟ್ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ವೃತ್ತದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ. ಡಿಪ್ಲೊಮಾ ವಿದ್ಯಾರ್ಥಿ ಪ್ರಥಮ್ (16) ಬೈಕ್ ನಲ್ಲಿ ಕಾಲೇಜಿಗೆ ತೆರಳಿದ್ದರು. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಪ್ರವಾಸಿ ಬಸ್ ಅಡ್ಡರಸ್ತೆಯಿಂದ ಮುಖ್ಯರಸ್ತೆಗೆ ಬಂದಾಗ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಬೈಕ್ ಬಸ್ಸಿನಡಿಗೆ ಬಿದ್ದು ಪ್ರಥಮ್ ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಸಿಐ ಕುಮಾರ್ ಬಂದು ಪರಿಶೀಲನೆ ನಡೆಸಿದರು. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ASI of Bengaluru Kamakshipalya Police Station passed away due to heart attack