Valentine’s Day 2023: ವ್ಯಾಲೆಂಟೈನ್ ಡೇ ಯಂದು ನಡೆಯುವ ಅಯೋಗ್ಯ ಕೃತ್ಯಗಳನ್ನು ತಡೆಯಿರಿ !
Valentine's Day 2023: 'ವ್ಯಾಲೆಂಟೈನ್ ಡೇ’ಯಂದು ನಡೆಯುವ ಅಯೋಗ್ಯ ಕೃತ್ಯಗಳನ್ನು ತಡೆಯಿರಿ ! ಹಿಂದೂ ಜನಜಾಗೃತಿ ಸಮಿತಿಯಿಂದ ತಹಾಶೀಲ್ದಾರರು ಹಾಗೂ ಪೊಲೀಸ್ ಆಯುಕ್ತರಿಗೆ ಮನವಿ
Valentine’s Day 2023 – ಬೆಂಗಳೂರು : ಪ್ರೇಮಿಗಳ ದಿನವೆಂದು ಆಚರಿಸುವ ಫೆಬ್ರವರಿ 14 ರಂದು ನಡೆಯುವ ತಪ್ಪು ವಿಧಗಳನ್ನು ಗಮನದಲ್ಲಿರಿಸಿ ಪಾರ್ಕ್, ಮುಂತಾದ ಸ್ಥಳಗಳಲ್ಲಿ ಅಯೋಗ್ಯ ಕೃತಿಗಳನ್ನು ತಡೆಯಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ಸಮಸ್ತ ಹಿಂದೂ ಸಂಘಟನೆಗಳ ವತಿಯಿಂದ ತಹಾಶೀಲ್ದಾರರು ಹಾಗೂ ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೋಲಿಸ್ ಆಯುಕ್ತರಿಗೆ ಮನವಿ ನೀಡಲಾಯಿತು. ಮನವಿಗೆ ಸ್ಪಂದಿಸಿದ ಆಯುಕ್ತರು ‘ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದರು.
ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ನವೀನ್ ಗೌಡ ಮಾತನಾಡಿ, ಕಳೆದ ಅನೇಕ ವರ್ಷಗಳಿಂದ ಭಾರತದಂತಹ ಸಾಂಸ್ಕೃತಿಕ ದೇಶದಲ್ಲಿ 14 ಫೆಬ್ರವರಿಯಂದು ‘ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ಪ್ರೇಮಿಗಳ ದಿನವನ್ನು ಆಚರಿಸುವ ಪದ್ಧತಿಯು ಹೆಚ್ಚಳವಾಗಿದೆ. ದೇಶದಲ್ಲಿ ಈ ಮೂಲಕ ವ್ಯವಹಾರಿಕ ಲಾಭಗಳಿಸುವ ಉದ್ದೇಶದಿಂದ ಪಾಶ್ಚಾತ್ಯರ ಈ ಅಂಧಾನುಕರಣೆಯು ಯುವಕ-ಯುವತಿಯರ ಅನೈತಿಕತೆ ಮತ್ತು ಸ್ವೇಚ್ಚಾಚಾರಕ್ಕೆ ಕಾರಣವಾಗುತ್ತಿದೆ.
ಪಾಶ್ಚಾತ್ಯರ ಈ ವ್ಯಾಲೆಂಟೈನ್ ದಿನ ಯುವತಿಯರನ್ನು ಪೀಡಿಸುವ ಮತ್ತು ಅವರಿಗೆ ಹಿಂಸೆ ನೀಡುವ, ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುವ ದಿನವನ್ನಾಗಿ ಆಚರಿಸುತ್ತಿರುವುದು ಖೇದದ ಸಂಗತಿಯಾಗಿದೆ. ಈ ದಿನ ಪಾರ್ಟಿಯ ಹೆಸರಿನಲ್ಲಿ ಯುವಕ ಯುವತಿಯರು ಮದ್ಯಪಾನ, ದೂಮಪಾನ ಮಾಡುವುದು, ಡ್ರಗ್ ಮಾಫಿಯಾದಂತಹ ಕೃತ್ಯಗಳಿಗೆ ಬಲಿಯಾಗುವುದು ಮುಂತಾದ ಅನುಚಿತ ಘಟನೆಗಳ ಪ್ರಮಾಣ ಹೆಚ್ಚಳವಾಗುತ್ತಿದೆ.
ಅಷ್ಟೇಅಲ್ಲದೇ ಈ ದಿನ ಸಮೀಕ್ಷೆಯ ಪ್ರಕಾರ ಗರ್ಭನಿರೋಧಕ ಮಾರಾಟ ಅಧಿಕವಾಗುತ್ತಿರುವುದು, ಅನೈತಿಕತೆ ಹೆಚ್ಚಾಗುತ್ತಿರುವುದರ ದ್ಯೋತಕವಾಗಿದೆ. ಈ ವ್ಯಾಲೆಂಟೈನ್ ದಿನದ ಕಾರಣ ಶಾಲಾ-ಕಾಲೇಜುಗಳ ಶೈಕ್ಷಣಿಕ ವಾತವರಣ ಹಾಳಾಗತ್ತದೆ. ಇದಕ್ಕೆ ಪರ್ಯಾಯವಾಗಿ ಫೆಬ್ರುವರಿ 14 ರಂದು ಮಾತೃ-ಪಿತೃ ಪೂಜನೀಯ ದಿನವನ್ನು ಆಚರಿಸಬೇಕು, ವ್ಯಾಲೆಂಟೈನ್ ದಿನದಂದು ವಿಶೇಷ ಪೋಲಿಸ್ ದಳ ರಚಿಸಿ ಶಾಲಾ-ಕಾಲೇಜುಗಳಲ್ಲಿ ಅನುಚಿತ ಕೃತ್ಯ ಮಾಡುವವರ ಮೇಲೆ, ವೇಗದಿಂದ ವಾಹನ ಓಡಿಸುವವರ ಮೇಲೆ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ನವೀನ್ ಗೌಡ, ಶ್ರೀ. ನೀಲೇಶ್, ಶ್ರೀರಾಮ ಸೇನೆಯ ಶ್ರೀ. ಸುರೇಶ್ ಗೌಡ, ‘ಗೋ ಸೇವಾ ಗತಿವಿಧಿ’ಯ ಸೌ. ಭಾರತಿ, ನ್ಯಾಯವಾದಿ ಗಂಗಾಧರ್, ಹಿಂದುತ್ವನಿಷ್ಠರಾದ ಶ್ರೀ. ಶಿವಯ್ಯ ಶಾಸ್ತ್ರಿ, ಶ್ರೀ. ರಂಗನಾಥ್ ಮತ್ತಿತರರು ಉಪಸ್ಥಿತರಿದ್ದರು.
Avoid inappropriate acts on Valentine’s Day 2023
Follow us On
Google News |
Advertisement