ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ಕೊರೋನಾ ಪಾಸಿಟಿವ್

ಕರ್ನಾಟಕ ಸಿಎಂ ಬಿ ಎಸ್ ಯಡಿಯೂರಪ್ಪ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರಗೆ ಕೊರೋನಾ ಸೋಂಕು ಧೃಡ ಪಟ್ಟಿದೆ.

ಮಾಹಾಮಾರಿ ಕೊರೋನಾಗೆ ಅವರು ಇವರು ಎಂಬ ಮಾತಿಲ್ಲ, ಸಿನಿಮಾ, ರಾಜಕಾರಣಿಗಳನ್ನೂ ಸಹ ಅದು ಬಿಟ್ಟಿಲ್ಲ. ಸದ್ಯ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಸಂಪುಟದ ಅನೇಕ ಸಚಿವರು ಸೇರಿದಂತೆ ಹಲವು ಜನಪ್ರತಿನಿಧಿಗಳು ಈ ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಈಗ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಗ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

( Kannada News ) ಬೆಂಗಳೂರು : ಕೋವಿಡ್ -19 ಪಾಸಿಟಿವ್ ಕಾಣಿಸಿಕೊಂಡಿದೆ ಎಂದು ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಶುಕ್ರವಾರ ಹೇಳಿದ್ದಾರೆ.

“ವಾಡಿಕೆಯ ತಪಾಸಣೆಯ ಸಮಯದಲ್ಲಿ, ನನಗೆ ಕೋವಿಡ್ -19 ಪಾಸಿಟಿವ್ ಇರುವುದು ತಿಳಿದು ಬಂದಿದೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಅವರು ತಮ್ಮ ಟ್ವಿಟ್ಟರ್ ನಲ್ಲಿ ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್ ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಎಲ್ಲಾ ಮುನ್ನೆಚ್ಚರಿಕೆ ವಹಿಸಿಬೇಕು ಎಂದು ವಿನಂತಿಸಿಕೊಳ್ಳುತ್ತೇನೆ. ಎಂದು ಟ್ವೀಟ್​​ ಮಾಡಿದ್ದಾರೆ.

ಇತ್ತೀಚೆಗೆ ಅವರೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರಿಗೂ “ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ ಮತ್ತು ಸುರಕ್ಷಿತವಾಗಿರಿ” ಎಂದು ಅವರು ವಿನಂತಿಸಿದ್ದಾರೆ.

ಮಾಹಾಮಾರಿ ಕೊರೋನಾಗೆ ಅವರು ಇವರು ಎಂಬ ಮಾತಿಲ್ಲ, ಸಿನಿಮಾ, ರಾಜಕಾರಣಿಗಳನ್ನೂ ಸಹ ಅದು ಬಿಟ್ಟಿಲ್ಲ. ಸದ್ಯ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಸಂಪುಟದ ಅನೇಕ ಸಚಿವರು ಸೇರಿದಂತೆ ಹಲವು ಜನಪ್ರತಿನಿಧಿಗಳು ಈ ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಈಗ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಗ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

Scroll Down To More News Today