ಬೆಂಗಳೂರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಮಾಡಿ ಕೊಲೆ; ಆರೋಪಿ ಬಂಧನ
ರಾಮಮೂರ್ತಿ ನಗರ ಠಾಣೆ ಪೊಲೀಸರು (Police) ಬಾಗಲಕೋಟೆ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದು, ಬಾಂಗ್ಲಾದೇಶ ಮೂಲದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ (Assault) ಎಸಗಿ ಕೊಲೆ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದ ವಿಚಾರಣೆ ಮುಂದುವರೆದಿದೆ.
- ಕಲ್ಕೆರೆ ಕೆರೆ (Lake) ಬಳಿ ನಿರ್ಜನ ಪ್ರದೇಶದಲ್ಲಿ ಶವ ಪತ್ತೆ
- ನೀರಿನ ಟ್ಯಾಂಕರ್ ಚಾಲಕನಾಗಿದ್ದ ಆರೋಪಿ ಬಂಧಿತ
- ಪೊಲೀಸರು ಸಿಸಿಟಿವಿ ಮತ್ತು ಮರಣೋತ್ತರ ವರದಿ ಆಧರಿಸಿ ತನಿಖೆ
ಬೆಂಗಳೂರು (Bengaluru): ಬೆಂಗಳೂರು ನಗರದಲ್ಲಿ ನಡೆದ ಭೀಕರ ಘಟನೆ ಇದೀಗ ಬೆಳಕಿಗೆ ಬಂದಿದೆ. ಜನವರಿ 24ರಂದು ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಕೆರೆ ಕೆರೆ ಬಳಿಯ ನಿರ್ಜನ ಪ್ರದೇಶದಲ್ಲಿ 28 ವರ್ಷದ ಬಾಂಗ್ಲಾದೇಶ ಮೂಲದ ಮಹಿಳೆಯ ಶವ ಪತ್ತೆಯಾಗಿತ್ತು. ಪ್ರಾಥಮಿಕ ತನಿಖೆಯಿಂದಾಗಿ, ಮಹಿಳೆಯ ಮೇಲೆ ದೌರ್ಜನ್ಯ ನಡೆಸಿ ನಂತರ ಹತ್ಯೆಗೈದು ಪರಾರಿಯಾದ ಘಟನೆ ದೃಢಪಟ್ಟಿತ್ತು.
ಈ ಸಂಬಂಧ ಬಾಗಲಕೋಟೆ ಮೂಲದ ಮುದುಕಪ್ಪ (28) ಎಂಬಾತನನ್ನು ಪೊಲೀಸರು ಫೆಬ್ರವರಿ 2ರಂದು ಬಂಧಿಸಿದ್ದಾರೆ. ಬಂಧಿತನು ಬೆಂಗಳೂರಿನಲ್ಲಿ ವಾಟರ್ ಟ್ಯಾಂಕರ್ (Water Tanker) ಚಾಲಕನಾಗಿ ಕೆಲಸ ಮಾಡುತ್ತಿದ್ದ.
ಮಹಿಳೆ ವಾಸವಿದ್ದ ಶೆಡ್ ಹಾಗೂ ಆಕೆ ಕೆಲಸ ಮಾಡುತ್ತಿದ್ದ ಅಪಾರ್ಟ್‌ಮೆಂಟ್‌ಗೆ (Apartment) ನೀರು ಪೂರೈಸುವ ನೆಪದಲ್ಲಿ ಆರೋಪಿ ಆಕೆಯನ್ನು ಗುರುತಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ದಿನ, ಜನವರಿ 23ರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿ, ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ ಆಕೆಯನ್ನು ಉಸಿರುಗಟ್ಟಿಸಿ ಕೊಂದು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ.
ಪೊಲೀಸರು ಸಿಸಿಟಿವಿ ದೃಶ್ಯಗಳು, ಮರಣೋತ್ತರ ಪರೀಕ್ಷಾ ವರದಿ, ಮತ್ತು ಎಫ್ಎಸ್ಎಲ್ (Forensic Science Laboratory) ವರದಿ ಆಧರಿಸಿ ಮುದುಕಪ್ಪನನ್ನು ಬಂಧಿಸಿದ್ದು, ಆತನ ವಿರುದ್ಧ ಗಂಭೀರ ಪ್ರಕರಣ ದಾಖಲಿಸಿದ್ದಾರೆ.
Bangladeshi Woman Murdered in Bengaluru: Accused Arrested