ಬಸವರಾಜ ಬೊಮ್ಮಾಯಿ ಶಕುನಿ ಇದ್ದಂತೆ; ಕಾಂಗ್ರೆಸ್ ವರಿಷ್ಠ ರಣದೀಪ್ ಸಿಂಗ್ ಸುರ್ಜೇವಾಲಾ ಟೀಕೆ

ಬೆಂಗಳೂರು (Bengaluru): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಶಕುನಿ (Shakuni) ಎಂದು ಕಾಂಗ್ರೆಸ್ ವರಿಷ್ಠ ರಣದೀಪ್ ಸಿಂಗ್ ಸುರ್ಜೇವಾಲಾ (Randeep Surjewala) ಟೀಕಿಸಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ನೀಡಿದ ಸಂದರ್ಶನದಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮಾತನಾಡಿದರು.

ನವ ಕರ್ನಾಟಕದಲ್ಲಿ ದಲಿತರು ಆರ್ಥಿಕವಾಗಿ ಸಬಲರಾಗಬೇಕು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಕುನಿ ಇದ್ದಂತೆ. ಕೊನೆಗೆ ಪಾಂಡವರು ಗೆಲ್ಲುತ್ತಾರೆ. ಭ್ರಷ್ಟ ಬಿಜೆಪಿ ಸರಕಾರ ಮೀಸಲಾತಿ ಹೆಸರಿನಲ್ಲಿ ದಲಿತ, ಬುಡಕಟ್ಟು, ಅಲ್ಪಸಂಖ್ಯಾತ ಹಾಗೂ ಹಿಂದುಳಿದವರಿಗೆ ವಂಚಿಸಿದೆ. ಅವರು 90 ದಿನಗಳಲ್ಲಿ 3 ಬಾರಿ ಮೀಸಲಾತಿಯನ್ನು ಬದಲಾಯಿಸಿದರು. ಬಸವರಾಜ ಬೊಮ್ಮಾಯಿ 40 ಪರ್ಸೆಂಟ್ ಕಮಿಷನ್ ಪಡೆದು ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ. ಇದು ಜನತೆಗೆ ಮಾಡಿದ ದೊಡ್ಡ ದ್ರೋಹ ಎಂದು ರಣದೀಪ್ ಸಿಂಗ್ ಸುರ್ಜೇವಾಲಾ ಟೀಕಿಸಿದರು.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ‘ಈ ಸರ್ಕಾರ ಮುಸ್ಲಿಮರ ಮೀಸಲಾತಿಯನ್ನು ಕಿತ್ತುಕೊಂಡು ಒಕ್ಕಲಿಗರಿಗೆ, ಲಿಂಗಾಯತರಿಗೆ ನೀಡಿದ್ದು, ಇದನ್ನು ಒಪ್ಪಿಕೊಳ್ಳುವಂತೆ ಮಠಾಧೀಶರಾದ ಜಯಮೃತಂಜಯ ಸ್ವಾಮಿ ಹಾಗೂ ನಿರ್ಮಲಾನಂದನಾಥ ಸ್ವಾಮಿಗೆ ದೂರವಾಣಿ ಮೂಲಕ ಒತ್ತಡ ಹೇರಿದ್ದು, ಇದೊಂದು ರೀತಿಯ ಬೆದರಿಕೆ’ ಎಂದರು.

ಶಕುನಿ ಮೇಲಿನ ಟೀಕೆಗೆ ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ವರಿಷ್ಠರು ನನ್ನನ್ನು ಶಕುನಿ ಎಂದು ಕರೆದಿದ್ದಾರೆ. ಎಲ್ಲರೂ ನಾನು ಜನಸಾಮಾನ್ಯರ ಮುಖ್ಯಮಂತ್ರಿ ಎಂದು ಹೇಳುತ್ತಾರೆ. ಆದ್ದರಿಂದ ಅವರ ಟೀಕೆಗಳಿಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಆ ಟೀಕೆಗೆ ಜನ ತಕ್ಕ ಉತ್ತರ ನೀಡುತ್ತಾರೆ. ” ಎಂದಿದ್ದಾರೆ.

Basavaraj Bommai is like Shakuni Says Congress chief Randeep Singh Surjewala

Related Stories