Welcome To Kannada News Today

ಕೊರೋನ ನಿಯಂತ್ರಿಸಲು ಬಿಬಿಎಂಪಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ ರಾಜ್ಯ ಸರ್ಕಾರ

ಕೊವಿಡ್ ನಿಯಮಾವಳಿಗೆ ಸಂಬಂಧಿಸಿದಂತೆ ಬಿಬಿಎಂಪಿಗೆ ಸ್ವತಂತ್ರ ಅಧಿಕಾರ ನೀಡಲಾಗಿದೆ, ಕೊರೋನ ನಿಯಂತ್ರಿಸಲು ಬಿಬಿಎಂಪಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ.

🌐 Kannada News :

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಉಲ್ಬಣಿಸುತ್ತಿದ್ದು, ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಯಾವುದೇ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರವು ಬಿಬಿಎಂಪಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ.

ಬೆಂಗಳೂರಿನಲ್ಲಿ ಕೊವಿಡ್ ನಿಯಂತ್ರಣಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ಯಾವ ಕ್ರಮಬೇಕಾದರೂ ತೆಗೆದುಕೊಳ್ಳಬಹುದು. ಕಂಟೈನ್ಮೆಂಟ್, ಸೀಲ್‌ಡೌನ್, ಕರ್ಫ್ಯೂ ಸೇರಿದಂತೆ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಜರುಗಿಸಲು ಬಿಬಿಎಂಪಿ ಸ್ವತಂತ್ರವಾಗಿ ನಿಲುವು ತೆಗೆದುಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಸರ್ಕಾರ ತಿಳಿಸಿದೆ.

📱 Latest Kannada News ಗಳಿಗಾಗಿ Kannada News Today App ಡೌನ್ ಲೋಡ್ ಮಾಡಿಕೊಳ್ಳಿ.
📣 All Kannada News Now in our Facebook Page.
Contact for web design services Mobile