Bengaluru Airport: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಗಾಂಜಾ ದಂಧೆ ಬಯಲು; ಇಬ್ಬರ ಬಂಧನ
Bengaluru Airport: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬ್ಯಾಂಕಾಕ್‌ನಿಂದ ಬಂದ ಇಬ್ಬರು ಪ್ರಯಾಣಿಕರನ್ನು ತಡೆದು 2.18 ಕೋಟಿ ರೂ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
- ಬೆಂಗಳೂರು ಏರ್‌ಪೋರ್ಟ್‌ನಲ್ಲಿ 2.18 ಕೋಟಿ ಗಾಂಜಾ ವಶ
- ಹೈಡ್ರೋಪೋನಿಕ್ ಗಾಂಜಾ ಕಳ್ಳಸಾಗಣೆ ಪ್ರಕರಣ ಪತ್ತೆ
- NDPS ಕಾಯ್ದೆ ಅಡಿಯಲ್ಲಿ ಇಬ್ಬರು ಪ್ರಯಾಣಿಕರ ಬಂಧನ
Bengaluru Airport: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ತಪಾಸಣೆಯಲ್ಲಿ ಭಾರಿ ಪ್ರಮಾಣದ ಮಾದಕ ವಸ್ತು ಪತ್ತೆಯಾಗಿದೆ.
ಬ್ಯಾಂಕಾಕ್‌ನಿಂದ ಆಗಮಿಸಿದ ಇಬ್ಬರು ಪ್ರಯಾಣಿಕರ ಮೇಲೆ ಅನುಮಾನಗೊಂಡ ಅಧಿಕಾರಿಗಳು, ಟರ್ಮಿನಲ್–2ರಲ್ಲಿ ಲಗೇಜ್ ತಪಾಸಣೆ ನಡೆಸಿದ್ದಾರೆ.
ಲಗೇಜ್‌ನಲ್ಲಿತ್ತು ಕೋಟಿ ಮೌಲ್ಯದ ಗಾಂಜಾ
ತಪಾಸಣೆ ವೇಳೆ ಪ್ರಯಾಣಿಕರ ಬ್ಯಾಗ್‌ಗಳಲ್ಲಿ 6.24 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುವಿನ ಮಾರುಕಟ್ಟೆ ಮೌಲ್ಯ ಸುಮಾರು 2.18 ಕೋಟಿ ರೂ ಎಂದು ಕಸ್ಟಮ್ಸ್ ಇಲಾಖೆ ತಿಳಿಸಿದೆ. ಈ ಗಾಂಜಾವನ್ನು ಅತ್ಯಂತ ಗುಪ್ತವಾಗಿ ಕಳ್ಳಸಾಗಣೆ ಮಾಡಲು ಯತ್ನಿಸಲಾಗುತ್ತಿತ್ತು.
NDPS ಕಾಯ್ದೆ ಅಡಿಯಲ್ಲಿ ಬಂಧನ
ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು NDPS ಕಾಯ್ದೆ, 1985ರ ಅಡಿಯಲ್ಲಿ ಬಂಧಿಸಲಾಗಿದೆ. ಈ ಕುರಿತು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು (Bengaluru Customs Officers) ಸಾಮಾಜಿಕ ಜಾಲತಾಣ X ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಮುಂದುವರಿದ ತನಿಖೆ
ಗಾಂಜಾವನ್ನು ಎಲ್ಲಿಂದ ಸಾಗಣೆ ಮಾಡಲಾಗುತ್ತಿತ್ತು, ಇದರ ಹಿಂದೆ ಇರುವ ಜಾಲ ಯಾವುದು ಎಂಬ ಬಗ್ಗೆ ಕಸ್ಟಮ್ಸ್ ಅಧಿಕಾರಿಗಳು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಅಂತರಾಷ್ಟ್ರೀಯ ಮಾದಕ ವಸ್ತು ಕಳ್ಳಸಾಗಣೆ ಜಾಲವನ್ನು ಪತ್ತೆಹಚ್ಚಲು ತನಿಖೆ ತೀವ್ರಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



