ಬೆಂಗಳೂರು: ಬಸ್ ಓಡಿಸುವಾಗಲೆ ಬಿಎಂಟಿಸಿ ಬಸ್ ಚಾಲಕನಿಗೆ ಹೃದಯಾಘಾತ!
ಬಸ್ ಓಡಿಸುವಾಗ ಕಿರಣ್ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ರಸ್ತೆ ಬದಿಯಲ್ಲಿ ಸುರಕ್ಷಿತವಾಗಿ ಬಸ್ ನಿಲ್ಲಿಸಿ ಮೃತಪಟ್ಟಿದ್ದಾರೆ.
ಬೆಂಗಳೂರು (Bengaluru): ಬಸ್ ಓಡಿಸುವಾಗ ಚಾಲಕನಿಗೆ ಹೃದಯಾಘಾತವಾಗಿ ಸ್ಟೇರಿಂಗ್ ಮೇಲೆಯೇ ಕೊನೆಯುಸಿರೆಳೆದಿದ್ದಾನೆ. ಕಿರಣ್ ಕುಮಾರ್ (40) ದಾಸನಾಪುರ ಬಸ್ ಡಿಪೋದಲ್ಲಿ ಬಿಎಂಟಿಸಿ ಬಸ್ (BMTC Bus) ಚಾಲಕನಾಗಿ ಕೆಲಸ ಮಾಡುತ್ತಿದ್ದರು, ಅವರು ಆರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.
ಬುಧವಾರ ಬೆಳಗ್ಗೆ ಬಸ್ ಓಡಿಸುವಾಗ ಕಿರಣ್ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ರಸ್ತೆ ಬದಿಯಲ್ಲಿ ಸುರಕ್ಷಿತವಾಗಿ ಬಸ್ ನಿಲ್ಲಿಸಿ ಮೃತಪಟ್ಟಿದ್ದಾರೆ. ಕಂಡಕ್ಟರ್ ಮತ್ತು ಇತರ ಪ್ರಯಾಣಿಕರು ಅವರನ್ನು ಆಸ್ಪತ್ರೆಗೆ ಸಾಗಿಸಿದರು, ಆದರೆ ಅವರು ಈಗಾಗಲೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಕೊನೆಯ ಗಳಿಗೆಯಲ್ಲೂ ಪ್ರಯಾಣಿಕರ ಸುರಕ್ಷತೆ ಮರೆಯದ ಚಾಲಕ, ಯಾರಿಗೂ ತೊಂದರೆ ಆಗದಂತೆ ಬಸ್ ಅನ್ನು ಸುರಕ್ಷಿತ ಸ್ಥಳದಲ್ಲಿ ನಿಲ್ಲಿಸಿದ್ದಾರೆ, ಇಲ್ಲದೆ ಹೋದಲ್ಲಿ ಇನ್ನಷ್ಟು ಅವಘಡ ಸಂಭವಿಸುತ್ತಿತ್ತು.
ಇನ್ನು, ಜಾಣತನದಿಂದ ಬಸ್ ರಸ್ತೆ ಬದಿ ನಿಲ್ಲಿಸಿ ಸ್ಟೇರಿಂಗ್ ಮೇಲೆ ಬೀಳುತ್ತಿರುವ ದೃಶ್ಯಗಳು ಬಸ್ಸಿನ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿವೆ. ಆ ದೃಶ್ಯಗಳು ವೈರಲ್ ಆಗಿವೆ. ನೆಲಮಂಗಲ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Bengaluru BMTC bus driver has a heart attack while driving the bus