ಬೆಂಗಳೂರು ಕಟ್ಟಡ ಕುಸಿತ: ಸಾವಿನ ಸಂಖ್ಯೆ 5ಕ್ಕೆ ಏರಿಕೆ, ಹಲವರು ಸಿಲುಕಿರುವ ಶಂಕೆ
ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಏಳು ಅಂತಸ್ತಿನ ಕಟ್ಟಡ ಕುಸಿದು ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ
ಬೆಂಗಳೂರು (Bengaluru): ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ (Babusapalya) ನಿರ್ಮಾಣ ಹಂತದ ಏಳು ಅಂತಸ್ತಿನ ಕಟ್ಟಡ ಕುಸಿದು (building collapse) ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏತನ್ಮಧ್ಯೆ, ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ ಪತ್ತೆಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಅಗ್ನಿಶಾಮಕ ಮತ್ತು ತುರ್ತು ವಿಭಾಗದ ಎರಡು ತಂಡಗಳನ್ನು ರಕ್ಷಣಾ ಕಾರ್ಯಾಚರಣೆಗೆ ಇಳಿಸಲಾಗಿದೆ. ನಗರದಲ್ಲಿ ಭಾರೀ ಮಳೆ ಸುರಿಯುತ್ತಿದ್ದ ಸಂದರ್ಭದಲ್ಲಿ ನಿನ್ನೆ ಈ ಘಟನೆ ನಡೆದಿದೆ..
ಬೆಂಗಳೂರು ಮಳೆ, ನೀರು ತುಂಬಿದ ಗುಂಡಿಗೆ ಬಿದ್ದ ಅಂಗವಿಕಲ ಮಹಿಳೆ!
ಪ್ರಾಥಮಿಕ ತನಿಖೆಯ ಪ್ರಕಾರ, ಸಂಪೂರ್ಣ ಕಟ್ಟಡ ಕುಸಿದಿದ್ದು, ಜನರು ಕೆಳಗೆ ಸಿಲುಕಿಕೊಂಡಿದ್ದರು ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ರಕ್ಷಿಸಲಾದ 14 ಮಂದಿಯಲ್ಲಿ ಏಳು ಮಂದಿ ಆಸ್ಪತ್ರೆಯಲ್ಲಿದ್ದಾರೆ ಎಂದು ಅವರು ಹೇಳಿದರು. ಕಟ್ಟಡ ಅಕ್ರಮವಾಗಿ ಕಟ್ಟಲಾಗುತ್ತಿದ್ದು, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶಿವಕುಮಾರ್ ಹೇಳಿದರು.
ಬೆಂಗಳೂರು: ಸಿಎಂ ಆಗಿದ್ದರೂ ನನಗೆ ಇನ್ನೂ ಸ್ವಂತ ಮನೆ ಇಲ್ಲ; ಸಿದ್ದರಾಮಯ್ಯ
“ಯಾವುದೇ ಅನುಮತಿ ಇಲ್ಲ ಮತ್ತು ಕಾನೂನುಬಾಹಿರ ನಿರ್ಮಾಣ ಮಾಡಲಾಗುತ್ತಿದೆ. ನಾವು ಮಾಲೀಕರು, ಗುತ್ತಿಗೆದಾರರು ಮತ್ತು ಎಲ್ಲರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಎಲ್ಲೆಲ್ಲಿ ಇಂತಹ ಅಕ್ರಮ ನಿರ್ಮಾಣಗಳು ನಡೆಯುತ್ತಿದ್ದರೂ ಕೂಡಲೇ ತಡೆಹಿಡಿಯುತ್ತೇವೆ, ಈ ಬಗ್ಗೆ ದೊಡ್ಡ ಮಟ್ಟದ ಸಮೀಕ್ಷೆ ನಡೆಸುತ್ತೇನೆ ಎಂದು ಅವರು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
Bengaluru building collapse, Death toll climbs to 5