ಬೆಂಗಳೂರು: ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ, ದಂಪತಿ ಸ್ಥಳದಲ್ಲೇ ದುರ್ಮರಣ
ಕೆಂಗೇರಿಯಲ್ಲಿ ಸ್ಕೂಟರ್‌ಗೆ ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ ಹೊಡೆದ ದುರ್ಘಟನೆ ನಡೆದಿದೆ. ಪತಿ-ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
- ಸ್ಕೂಟರ್‌ಗೆ ಡಿಕ್ಕಿ ಹೊಡೆದ ಸಿಮೆಂಟ್ ಮಿಕ್ಸರ್ ಲಾರಿ
- ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಪತಿ-ಪತ್ನಿ ಸ್ಥಳದಲ್ಲೇ ಸಾವು
- ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಲಾರಿ ಚಾಲಕ ವಶಕ್ಕೆ
ಬೆಂಗಳೂರು (Bengaluru): ಕೆಂಗೇರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪತಿ-ಪತ್ನಿ ಸಾವಿಗೀಡಾದ ಘಟನೆ ನೆರೆದವರ ಹೃದಯ ಕಲಕಿದೆ. ಉತ್ತರಹಳ್ಳಿಯ ದರ್ಗಾ ಕಡೆ ಹೋಗುತ್ತಿದ್ದ ದಂಪತಿಯ ಸ್ಕೂಟರ್‌ಗೆ (Scooter) ಸಿಮೆಂಟ್ ಮಿಕ್ಸರ್ ಲಾರಿ ಅಪಾಯಕಾರಿ ವೇಗದಲ್ಲಿ ಡಿಕ್ಕಿ ಹೊಡೆದು, ಸ್ಥಳದಲ್ಲೇ ಇಬ್ಬರೂ ಪ್ರಾಣ ಬಿಟ್ಟಿದ್ದಾರೆ.
ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ. ಆಘಾತಕಾರಿ ಸಂಗತಿಯೆಂದರೆ, ಅಪಘಾತದ ಬಳಿಕವೂ ಲಾರಿ ಚಾಲಕ ಸ್ಕೂಟರ್‌ನ್ನು ಕೆಲ ದೂರ ಎಳೆದುಕೊಂಡು ಹೋಗಿದ್ದಾನೆ. ಸ್ಥಳೀಯರು ಈ ಘಟನೆ ನೋಡಿ ಬೆಚ್ಚಿಬಿದ್ದಿದ್ದಾರೆ.
ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ, ಮೃತ ದಂಪತಿ ಇಬ್ಬರೂ ಹೆಲ್ಮೆಟ್ ಧರಿಸಿದ್ದರೂ, ಅಪಘಾತದ ರಭಸದಿಂದ ತಕ್ಷಣವೇ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
Bengaluru Couple Dies as Cement Mixer Hits Scooter
Our Whatsapp Channel is Live Now 👇