Bengaluru: ಬೆಂಗಳೂರು ಡ್ರಗ್ಸ್ ದಂಧೆ; ಇಬ್ಬರು ವಿದೇಶಿಗರ ಬಂಧನ, 1 ಕೋಟಿ ಮೌಲ್ಯದ ಮಾದಕ ವಸ್ತು ವಶ
Bengaluru Drug Bust,: ಬೆಂಗಳೂರು ಸಿಸಿಬಿ ಮಾದಕ ದ್ರವ್ಯ ನಿಯಂತ್ರಣ ಘಟಕ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಿ, ಸುಮಾರು ಒಂದು ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದೆ.

- ಬೆಂಗಳೂರು ಡ್ರಗ್ಸ್ ದಂಧೆ ವಿರುದ್ಧ ಸಿಸಿಬಿ ಕಾರ್ಯಾಚರಣೆ
- ಇಬ್ಬರು ವಿದೇಶಿಗರ ಬಂಧನ, ಮಾದಕ ವಸ್ತು ವಶ
- ಸುಮಾರು 1 ಕೋಟಿ ಮೌಲ್ಯದ ಡ್ರಗ್ಸ್ ಸೀಜ್
ಬೆಂಗಳೂರು (Bengaluru): ಬೆಂಗಳೂರು ನಗರದಲ್ಲಿ ಡ್ರಗ್ಸ್ ಜಾಲದ ವಿರುದ್ಧ ಸಿಸಿಬಿ ಪೊಲೀಸರು ಕೈಗೊಂಡ ಕಾರ್ಯಾಚರಣೆ ಮತ್ತೆ ಫಲ ನೀಡಿದೆ. ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಿರುವುದಾಗಿ (Bengaluru Drug Bust,) ಮಾದಕ ದ್ರವ್ಯ ನಿಯಂತ್ರಣ ಘಟಕ ಬುಧವಾರ ಮಾಹಿತಿ ನೀಡಿದೆ. ಈ ಕಾರ್ಯಾಚರಣೆಯಲ್ಲಿ ಅಪಾರ ಪ್ರಮಾಣದ ಮಾದಕ ವಸ್ತುಗಳು ವಶವಾಗಿವೆ.
ಬಂಧಿತ ಆರೋಪಿಗಳಿಂದ 101 ಗ್ರಾಂ ಕೊಕೇನ್ ಹಾಗೂ 481 ಗ್ರಾಂ ಹೈಡ್ರೋ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಅಪರಾಧಕ್ಕೆ ಬಳಸಲಾಗುತ್ತಿದ್ದ ಮೊಬೈಲ್ ಫೋನ್ಗಳು ಮತ್ತು ದ್ವಿಚಕ್ರ ವಾಹನಗಳನ್ನೂ ಪೊಲೀಸರು ಸೀಜ್ ಮಾಡಿದ್ದಾರೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಅಂದಾಜು ಮೌಲ್ಯ ಸುಮಾರು ಒಂದು ಕೋಟಿ ರೂಪಾಯಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು ಜನನಿಬಿಡ ರಸ್ತೆಯಲ್ಲಿ ಮಹಿಳೆ ಭೀಕರ ಹತ್ಯೆ; ಮಚ್ಚಿನಿಂದ ಕತ್ತು ಸೀಳಿ ಪರಾರಿ
ಬೇಗೂರು ವ್ಯಾಪ್ತಿಯಲ್ಲಿ ಮೊದಲ ಕಾರ್ಯಾಚರಣೆ
ಮೊದಲ ಪ್ರಕರಣದಲ್ಲಿ, ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೆಇಐಎಸ್ ಲೇಔಟ್ನಲ್ಲಿ ಹೈಡ್ರೋ ಗಾಂಜಾ ಸಾಗಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಮಾದಕ ದ್ರವ್ಯ ನಿಯಂತ್ರಣ ಘಟಕ ದಾಳಿ ನಡೆಸಿದೆ. ಈ ವೇಳೆ ವಿದೇಶಿ ಪ್ರಜೆಯೊಬ್ಬನನ್ನು ಬಂಧಿಸಲಾಗಿದ್ದು, ಸುಮಾರು ₹48 ಲಕ್ಷ ಮೌಲ್ಯದ ಹೈಡ್ರೋ ಗಾಂಜಾ ಮತ್ತು ಸಂಬಂಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ: ಬೆಂಗಳೂರು ನಡು ರಸ್ತೆಯಲ್ಲಿ ರಕ್ತಪಾತ; ಖಾರದ ಪುಡಿ ಎರಚಿ ರೌಡಿಶೀಟರ್ ಶಬ್ಬೀರ್ ಕೊಲೆ
ಕೆಆರ್ ಪುರಂನಲ್ಲಿ ಕೊಕೇನ್ ಸೀಜ್
ಇನ್ನೊಂದು ಪ್ರತ್ಯೇಕ ಕಾರ್ಯಾಚರಣೆಯಲ್ಲಿ, ಕೆಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಕೇನ್ ಸರಬರಾಜು ನಡೆಯುತ್ತಿದೆ ಎಂಬ ಸುಳಿವಿನ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಮತ್ತೊಬ್ಬ ವಿದೇಶಿ ಪ್ರಜೆಯನ್ನು ಬಂಧಿಸಲಾಗಿದ್ದು, ₹50.6 ಲಕ್ಷ ಮೌಲ್ಯದ ಕೊಕೇನ್, ಮೊಬೈಲ್ ಫೋನ್ ಮತ್ತು ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ.
ಸದ್ಯ ಇಬ್ಬರು ಆರೋಪಿಗಳ ರಾಷ್ಟ್ರೀಯತೆಯನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಡ್ರಗ್ಸ್ ಜಾಲದ ಹಿಂದಿರುವ ಸಂಪರ್ಕಗಳ ಕುರಿತು ತನಿಖೆ ಮುಂದುವರಿದಿದೆ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.



