ಬೆಂಗಳೂರು ಯುವತಿ ಪ್ರಿಯಕರನಿಗೆ ಕಳುಹಿಸಿದ್ದ ಖಾಸಗಿ ವಿಡಿಯೋ, ಫೋಟೋ ಅಶ್ಲೀಲ ವೆಬ್‌ಸೈಟ್‌ಗಳಲ್ಲಿ ಸೋರಿಕೆ

ಬೆಂಗಳೂರಿನ ಇಂದಿರಾನಗರದಲ್ಲಿ ಯುವತಿಯ ಖಾಸಗಿ ಫೋಟೋ ಮತ್ತು ವಿಡಿಯೋಗಳು ಅಶ್ಲೀಲ ವೆಬ್‌ಸೈಟ್‌ಗಳಲ್ಲಿ ಹರಿದಾಡಿರುವ ಆರೋಪ ಕೇಳಿಬಂದಿದೆ. ಸ್ನ್ಯಾಪ್‌ಚಾಟ್ ಖಾತೆ ಹ್ಯಾಕ್ ಆಗಿರುವ ಶಂಕೆಯ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಬೆಂಗಳೂರು (Bengaluru): ಪ್ರಿಯಕರನಿಗೆ ಹಂಚಿಕೊಂಡಿದ್ದ ಖಾಸಗಿ ಫೋಟೋ (Photos) ಮತ್ತು ವಿಡಿಯೋಗಳು (Videos) ಅಶ್ಲೀಲ ವೆಬ್‌ಸೈಟ್‌ಗಳಲ್ಲಿ ಕಾಣಿಸಿಕೊಂಡಿರುವ ಘಟನೆ ನಗರದಲ್ಲಿ ಆತಂಕ ಮೂಡಿಸಿದೆ. ಇಂದಿರಾನಗರದಲ್ಲಿ ನಡೆದಿರುವ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 27 ವರ್ಷದ ಯುವತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.

ಯುವತಿ ತನ್ನ ಪ್ರಿಯಕರನೊಂದಿಗೆ ಸ್ನ್ಯಾಪ್‌ಚಾಟ್ (Snapchat) ಮೂಲಕ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಂಡಿದ್ದರು. ಆದರೆ, ಕಿಡಿಗೇಡಿಗಳು ಆಕೆಯ ಖಾತೆಯನ್ನು ಹ್ಯಾಕ್ ಮಾಡಿ, ಖಾಸಗಿ ದೃಶ್ಯಗಳನ್ನು ಕಳವು ಮಾಡಿ ಅಶ್ಲೀಲ ವೆಬ್‌ಸೈಟ್‌ಗಳಲ್ಲಿ ಅಪ್‌ಲೋಡ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇಂಟರ್‌ನೆಟ್‌ನಲ್ಲಿ ತನ್ನ ಖಾಸಗಿ ಫೋಟೋಗಳು ಹರಿದಾಡುತ್ತಿರುವುದನ್ನು ಗಮನಿಸಿದ ಯುವತಿ ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿದ್ದಾರೆ. ತನ್ನ ಅನುಮತಿಯಿಲ್ಲದೆ ಪ್ರಕಟಿಸಿರುವ ಫೋಟೋ ಮತ್ತು ವಿಡಿಯೋಗಳನ್ನು ಸಂಬಂಧಪಟ್ಟ ವೆಬ್‌ಸೈಟ್‌ಗಳಿಂದ ತೆಗೆದುಹಾಕಬೇಕು ಹಾಗೂ ಕೃತ್ಯ ಎಸಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಮನವಿ ಮಾಡಿದ್ದಾರೆ.

ಈ ಸಂಬಂಧ ಪೂರ್ವ ವಿಭಾಗದ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು, ಖಾಸಗಿ ದೃಶ್ಯಗಳು ಹೇಗೆ ಸೋರಿಕೆಯಾಗಿವೆ ಮತ್ತು ಅವುಗಳನ್ನು ವೆಬ್‌ಸೈಟ್‌ಗಳಿಗೆ ಅಪ್‌ಲೋಡ್ ಮಾಡಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories