ಬೆಂಗಳೂರು ಗ್ರಾಮಾಂತರ ಗ್ರಾಮ ಪಂಚಾಯಿತಿ ಚುನಾವಣೆ: 2040 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕಿನ 46 ಗ್ರಾಮ ಪಂಚಾಯಿತಿಗಳ ಒಟ್ಟು 375 ಕ್ಷೇತ್ರಗಳ, 771 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅಂತಿಮವಾಗಿ 2040 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

(Kannada News) : ಬೆಂಗಳೂರು ಗ್ರಾಮಾಂತರ: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆ, ಮೊದಲ ಹಂತದ ಗ್ರಾಮ ಪಂಚಾಯಿತಿಯ ಚುನಾವಣೆಯು ಡಿ.22 ರಂದು ಹೊಸಕೋಟೆ ಹಾಗೂ ನೆಲಮಂಗಲ ತಾಲೂಕಿನಲ್ಲಿ ಒಟ್ಟು 47 ಗ್ರಾಮ ಪಂಚಾಯಿತಿಗಳ ಪೈಕಿ 46 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.

ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕಿನ 46 ಗ್ರಾಮ ಪಂಚಾಯಿತಿಗಳ ಒಟ್ಟು 375 ಕ್ಷೇತ್ರಗಳ, 771 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅಂತಿಮವಾಗಿ 2040 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಎರಡೂ ತಾಲೂಕುಗಳಿಂದ ಒಟ್ಟು 426 ಮತಗಟ್ಟೆಗಳನ್ನು ಗುರುತಿಸಲಾಗಿದ್ದು, 125381 ಪುರುಷ ಮತದಾರರು, 124205 ಮಹಿಳಾ ಮತದಾರರು ಹಾಗೂ 29 ಇತರೆ ಮತದಾರರು ಸೇರಿದಂತೆ ಒಟ್ಟು 249615 ಮತದಾರರಿದ್ದಾರೆ.

ಹೊಸಕೋಟೆ ತಾಲ್ಲೂಕಿನ 26 ಗ್ರಾಮ ಪಂಚಾಯಿತಿಗಳ ಒಟ್ಟು 211 ಕ್ಷೇತ್ರಗಳ 451 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅಂತಿಮವಾಗಿ 1050 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಒಟ್ಟು 241 ಮತಗಟ್ಟೆಗಳನ್ನು ಗುರುತಿಸಲಾಗಿದ್ದು, 71649 ಪುರುಷ ಮತದಾರರು, 70698 ಮಹಿಳಾ ಮತದಾರರು ಹಾಗೂ 05 ಇತರೆ ಮತದಾರರು ಸೇರಿದಂತೆ ಒಟ್ಟು 142352 ಮತದಾರರಿದ್ದಾರೆ.

ಹೊಸಕೋಟೆ ತಾಲೂಕಿನ 241 ಮತಗಟ್ಟೆಗಳಿಗೆ 241 ಪಿ.ಆರ್.ಓ., 241 ಎ.ಪಿ.ಆರ್.ಓ., 482 ಪಿ.ಓ.ಗಳು, ಸೇರಿದಂತೆ 964 ಮತಗಟ್ಟೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಶೇ. 10ರಷ್ಟು ಅಂದರೆ 97 ಸಿಬ್ಬಂದಿಗಳನ್ನು ಮೀಸಲು ಸಿಬ್ಬಂದಿಯಾಗಿ ನಿಯೋಜನೆ ಮಾಡಲಾಗಿದೆ.

ನೆಲಮಂಗಲ ತಾಲೂಕಿನ 20 ಗ್ರಾಮ ಪಂಚಾಯಿತಿಗಳ ಒಟ್ಟು 164 ಕ್ಷೇತ್ರಗಳ 320 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅಂತಿಮವಾಗಿ 990 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಒಟ್ಟು 185 ಮತಗಟ್ಟೆಗಳನ್ನು ಗುರುತಿಸಲಾಗಿದ್ದು, 53732 ಪುರುಷ ಮತದಾರರು, 53507 ಮಹಿಳಾ ಮತದಾರರು ಹಾಗೂ 24 ಇತರೆ ಮತದಾರರು ಸೇರಿದಂತೆ ಒಟ್ಟು 107263 ಮತದಾರರಿದ್ದಾರೆ.

ನೆಲಮಂಗಲ ತಾಲೂಕಿನ 185 ಮತಗಟ್ಟೆಗಳಿಗೆ 185 ಪಿ.ಆರ್.ಓ., 185 ಎ.ಪಿ.ಆರ್.ಓ., 370 ಪಿ.ಓ.ಗಳು, ಸೇರಿದಂತೆ 740 ಮತಗಟ್ಟೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಶೇ. 10ರಷ್ಟು ಅಂದರೆ 74 ಸಿಬ್ಬಂದಿಗಳನ್ನು ಮೀಸಲು ಸಿಬ್ಬಂದಿಯಾಗಿ ನಿಯೋಜನೆ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.