ಬೆಂಗಳೂರು ನಗರಾದ್ಯಂತ ನಾಳೆ ಮಾಂಸ ಮಾರಾಟ ನಿಷೇಧ! ಕಟ್ಟುನಿಟ್ಟಿನ ಸೂಚನೆ
ಸಾಧು ವಾಸವಾನಿ ಜಯಂತಿ ಹಿನ್ನೆಲೆಯಲ್ಲಿ ನವೆಂಬರ್ 25ರಂದು ಬೆಂಗಳೂರಿನಾದ್ಯಂತ ಪ್ರಾಣಿವಧೆ ಮತ್ತು ಮಾಂಸ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ನಗರದ ಎಲ್ಲಾ ಕಸಾಯಿಖಾನೆ ಹಾಗೂ ಮಾಂಸದ ಅಂಗಡಿಗಳಿಗೆ ಈ ಆದೇಶ ಅನ್ವಯವಾಗಲಿದೆ.

- ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ
- ಕಸಾಯಿಖಾನೆಗಳಲ್ಲಿ ಪ್ರಾಣಿವಧೆಗೆ ನಿರ್ಬಂಧ
- ಅಂಗಡಿ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ
ಬೆಂಗಳೂರು (Bengaluru): ಸಾಧು ವಾಸವಾನಿ ಜಯಂತಿ (Sadhu Vaswani Jayanti) ಅಂಗವಾಗಿ ನವೆಂಬರ್ 25ರಂದು ಬೆಂಗಳೂರಿನಾದ್ಯಂತ ಮಾಂಸ ಮಾರಾಟಕ್ಕೆ ಬ್ರೇಕ್ ಬೀಳಲಿದೆ. ಈ ಹಿನ್ನೆಲೆಯಲ್ಲಿ ನಗರದ ವ್ಯಾಪ್ತಿಯಲ್ಲಿರುವ ಮಾಂಸದ ಅಂಗಡಿಗಳು ನಾಳೆ ವ್ಯಾಪಾರ ನಡೆಸುವಂತಿಲ್ಲ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (Greater Bengaluru Authority) ವ್ಯಾಪ್ತಿಯ ಎಲ್ಲ ಕಸಾಯಿಖಾನೆಗಳಲ್ಲೂ ಪ್ರಾಣಿವಧೆ ನಡೆಸುವುದನ್ನು ನಿಷೇಧಿಸಲಾಗಿದೆ. ಇದರ ಜೊತೆಗೆ ಮಾಂಸದ ಅಂಗಡಿಗಳಲ್ಲಿ ಯಾವುದೇ ರೀತಿಯ ಮಾಂಸ ಮಾರಾಟಕ್ಕೂ ಅವಕಾಶ ಇರುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಪ್ರಾಧಿಕಾರದ ಪಶುಪಾಲನಾ ವಿಭಾಗದ ಉಪ ನಿರ್ದೇಶಕರು ಈ ಕುರಿತು ಆದೇಶ ಹೊರಡಿಸಿದ್ದು, ಜಯಂತಿಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ನಗರದ ಎಲ್ಲ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳ ಮಾಲೀಕರು ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆದೇಶ ಉಲ್ಲಂಘನೆಯಾಗದಂತೆ ಸಂಬಂಧಪಟ್ಟವರು ಗಮನಹರಿಸಬೇಕು ಎಂದು ಪ್ರಾಧಿಕಾರ ಸೂಚಿಸಿದೆ.
English Summary▼



