ಬೆಂಗಳೂರು ಪೊಲೀಸರಿಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರನ ಬಂಧನ
ಮಹಿಳೆಗೆ 2 ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ
ಬೆಂಗಳೂರು (Bengaluru): ಜೆಡಿಎಸ್‌ನ ಮಾಜಿ ಶಾಸಕರ ಪತ್ನಿ ನೀಡಿದ ವಂಚನೆ ದೂರಿನ ಆಧಾರದ ಮೇಲೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸಹೋದರನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಬೆಂಗಳೂರಿನ ಬಸವೇಶ್ವರನಗರ ಠಾಣೆ ಪೊಲೀಸರು ಪ್ರಲ್ಹಾದ್ ಜೋಶಿ ಅವರ ಅಣ್ಣ ಗೋಪಾಲ ಜೋಶಿ ಅವರನ್ನು ಕೊಲ್ಲಾಪುರದಲ್ಲಿ ಹಾಗೂ ಗೋಪಾಲ ಅವರ ಪುತ್ರ ಅಜಯ್ ಜೋಶಿ ಅವರನ್ನು ಪುಣೆಯಲ್ಲಿ ಬಂಧಿಸಲಾಗಿದೆ.
ಗುರುವಾರ ರಾತ್ರಿ ಬಸವೇಶ್ವರನಗರ ಪೊಲೀಸರು ಗೋಪಾಲ್ ಜೋಶಿ ಮತ್ತು ವಿಜಯಲಕ್ಷ್ಮಿ ಜೋಶಿ ಎಂಬ ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಎಫ್‌ಐಆರ್‌ನಲ್ಲಿ ಗೋಪಾಲ್ ಅವರ ಪುತ್ರ ಅಜಯ್ ಜೋಶಿ ಹೆಸರೂ ದಾಖಲಾಗಿದೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಮಾಜಿ ಶಾಸಕ ದೇವವಂದ್ ಫೂಲ್ ಸಿಂಗ್ ಚವಾಣ್ ಅವರ ಪತ್ನಿ ಸುನೀತಾ ಚವಾಣ್ (Sunita Chavan) ಅವರು ದೂರು ದಾಖಲಿಸಿದ್ದಾರೆ.
ಮೇ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ತನ್ನ ಕುಟುಂಬಕ್ಕೆ ಬಿಜೆಪಿ ಟಿಕೆಟ್ ನೀಡುವ ನೆಪದಲ್ಲಿ ಗೋಪಾಲ್ ಜೋಶಿ ಎರಡು ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ವಿಜಯಲಕ್ಷ್ಮಿ ಅವರನ್ನು ಪ್ರಲ್ಹಾದ್ ಜೋಶಿ ಅವರ ಸಹೋದರಿ ಎಂದು ಪರಿಚಯ ಮಾಡಲಾಗಿತ್ತು ಎಂದು ದೂರುದಾರರು ಆರೋಪಿಸಿದ್ದಾರೆ. ಸುನೀತ್ ಚವ್ಹಾಣ್ ಅವರ ದೂರಿನ ಆಧಾರದ ಮೇಲೆ ಬೆಂಗಳೂರು ಪೊಲೀಸರು (Bengaluru Police) ಗೋಪಾಲ್ ಜೋಶಿ, ವಿಜಯಲಕ್ಷ್ಮೀ ಹಾಗೂ ಅಜಯ್ ಜೋಶಿ ವಿರುದ್ಧ ಎಫ್ಐಆರ್ ದಾಖಲಿಸಿದ್ದು ಪ್ರಕರಣ ಸಂಬಂಧ ಇಲ್ಲಿಯುವರೆಗೂ ಮೂವರನ್ನು ಬಂಧಿಸಲಾಗಿದೆ.
Bengaluru police arrest Union Minister Pralhad Joshi brother