ಬೆಂಗಳೂರು ಹೆಡ್ ಕಾನ್‌ಸ್ಟೇಬಲ್ ತಿಪ್ಪಣ್ಣ ಪತ್ನಿ ಕಾಟದಿಂದ ಬೇಸತ್ತು ಆತ್ಮಹತ್ಯೆ

ಬೆಂಗಳೂರಿನ ಹೆಡ್ ಕಾನ್ ಸ್ಟೇಬಲ್ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರು (Bengaluru): ಪತ್ನಿ ಕಿರುಕುಳ ಸಹಿಸಲು ಸಾಧ್ಯವಾಗುತ್ತಿಲ್ಲ. ಎಲ್ಲ ರೀತಿಯಿಂದಲೂ ಕಿರುಕುಳ ನೀಡಿ ನರಕ ತೋರಿಸುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ (Atul Subhash) ನೇಣಿಗೇರಿದ ಪ್ರಕರಣ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಕೌಟುಂಬಿಕ ದೌರ್ಜನ್ಯ ಕಾನೂನುಗಳಿಗೆ ತಿದ್ದುಪಡಿ ತರಬೇಕೆಂಬ ಬೇಡಿಕೆಗಳು ವೇಗ ಪಡೆದುಕೊಂಡಿವೆ.

ಈ ಮಧ್ಯೆ ಐಟಿ ನಗರದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ಪತ್ನಿ ಮತ್ತು ಮಾವನ ಕಿರುಕುಳ ಸಹಿಸಲಾಗದೆ ಹೆಡ್ ಕಾನ್ ಸ್ಟೇಬಲ್ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಹಂದಿಗನೂರು ಗ್ರಾಮದ ತಿಪ್ಪಣ್ಣ (35) ಬೆಂಗಳೂರು ನಗರ ಪೊಲೀಸ್‌ (Bengaluru Police) ವಿಭಾಗದ ಹುಳಿಮಾವಿನಲ್ಲಿ ಸಿವಿಲ್‌ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅವರಿಗೆ ಪತ್ನಿ ಹಾಗೂ ಮಾವ ಕಿರುಕುಳ ನೀಡುತ್ತಿದ್ದರು ಎಂದು ತಿಳಿದುಬಂದಿದೆ.

ಬೆಂಗಳೂರು ಹೆಡ್ ಕಾನ್‌ಸ್ಟೇಬಲ್ ತಿಪ್ಪಣ್ಣ ಪತ್ನಿ ಕಾಟದಿಂದ ಬೇಸತ್ತು ಆತ್ಮಹತ್ಯೆ

ಇದೇ ತಿಂಗಳ 12ರಂದು ಕೂಡ ಪತ್ನಿ ಹಾಗೂ ಮಾವ ಕರೆ ಮಾಡಿ ತೀವ್ರವಾಗಿ ನಿಂದಿಸಿದ್ದಾರೆ. ನೀನು ಸತ್ತರೂ ಪರವಾಗಿಲ್ಲ ನನ್ನ ಮಗಳು ಆರಾಮವಾಗಿ ಬದುಕುತ್ತಾಳೆ ಎಂದು ಅವರ ಮಾವ ನಿಂದಿಸಿದ್ದರು ಎನ್ನಲಾಗಿದೆ. ಈ ಬಗ್ಗೆ ಜಿಗುಪ್ಸೆಗೊಂಡ ತಿಪ್ಪಣ್ಣ ಡೆತ್ ನೋಟ್ ಬರೆದಿಟ್ಟು ರೈಲಿನಡಿ ಸಿಲುಕಿ ಪ್ರಾಣಬಿಟ್ಟಿದ್ದಾರೆ

ಮಗನ ಸಾವಿಗೆ ನ್ಯಾಯ ಕೊಡಿಸುವಂತೆ ಶುಕ್ರವಾರ ಮಧ್ಯರಾತ್ರಿ ಮೃತನ ತಂದೆ ನೀಡಿದ ದೂರಿನ ಮೇರೆಗೆ ಬೈಯಪ್ಪನಹಳ್ಳಿ ರೈಲ್ವೇ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಇತರ ಸೆಕ್ಷನ್‌ಗಳ ಅಡಿಯಲ್ಲಿ ಪತ್ನಿ ಮತ್ತು ಮಾವ ವಿರುದ್ಧ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

Bengaluru Police Constable Die by Suicide Alleging Harassment from Wife

Related Stories