ಬೆಂಗಳೂರು: ಹೋಟೆಲ್‌ಗೆ ಕರೆದೊಯ್ದು ಮದ್ಯಪಾನ ಮಾಡಿಸಿ ಯುವತಿ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಬೆಂಗಳೂರಿನ ಕೋರಮಂಗಲದ ಪಬ್‌ನಲ್ಲಿ ಪರಿಚಯವಾದ ಯುವಕನ ವಿರುದ್ಧ ರಾಜಸ್ಥಾನದ ಯುವತಿ ಗಂಭೀರ ಆರೋಪ ಮಾಡಿದ್ದಾಳೆ. ಹೋಟೆಲ್‌ಗೆ ಆಹ್ವಾನಿಸಿ ಮದ್ಯಪಾನ ಮಾಡಿಸಿದ ಬಳಿಕ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಬೆಂಗಳೂರು (Bengaluru): ಪಬ್‌ನಲ್ಲಿ ಆರಂಭವಾದ ಪರಿಚಯವೊಂದು ಗಂಭೀರ ಅಪರಾಧ ಪ್ರಕರಣಕ್ಕೆ ತಿರುಗಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ರಾಜಸ್ಥಾನದ ಜೈಪುರದಿಂದ ಬಂದಿದ್ದ ಯುವತಿಯೊಬ್ಬಳಿಗೆ ಪಬ್‌ನಲ್ಲಿ ಪರಿಚಯವಾಗಿದ್ದ ವ್ಯಕ್ತಿ ಹೋಟೆಲ್‌ಗೆ ಆಹ್ವಾನಿಸಿ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಯುವತಿ ನೀಡಿದ ದೂರಿನ ಮೇರೆಗೆ ಮಡಿವಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಮೀರ್ ಎಂಬಾತನನ್ನು ಬಂಧಿಸಿದ್ದಾರೆ.

ಈ ಘಟನೆಗೆ ಕಾರಣವಾಗಿದ್ದು ಸಿಗರೇಟ್ ಸೇದಲು ಕೇಳಿದ ಲೈಟರ್ ಎನ್ನಲಾಗಿದೆ. ಕೋರಮಂಗಲದ (Koramangala) ಪಬ್‌ಗೆ ತೆರಳಿದ್ದ ಯುವತಿ ಅಲ್ಲಿ ಸಮೀರ್ ಬಳಿ ಲೈಟರ್ ಕೇಳಿದ್ದಳು. ಈ ಸಂದರ್ಭದಲ್ಲಿ ಮಾತುಕತೆ ಆರಂಭಿಸಿದ ಆತ, ಬಳಿಕ ಯುವತಿಯ ಮೊಬೈಲ್ ಸಂಖ್ಯೆಯನ್ನು ಪಡೆದುಕೊಂಡಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಂತರ ಇಬ್ಬರ ನಡುವೆ ಸಂಪರ್ಕ ಮುಂದುವರಿದಿದ್ದು, ಸಮೀರ್ ಯುವತಿಯನ್ನು ಮಡಿವಾಳದ ಹೋಟೆಲ್‌ಗೆ ಬರುವಂತೆ ಆಹ್ವಾನಿಸಿದ್ದಾನೆ ಎನ್ನಲಾಗಿದೆ. ಅಲ್ಲಿಗೆ ತೆರಳಿದ ಬಳಿಕ ಇಬ್ಬರೂ ಮದ್ಯ ಸೇವಿಸಿದ್ದಾರೆ. ಈ ವೇಳೆ ಯುವತಿಗೆ ಹೆಚ್ಚು ಮದ್ಯ ಕುಡಿಸಿ, ಆಕೆ ನಶೆಯಲ್ಲಿದ್ದಾಗ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.

ಘಟನೆ ನಡೆದ ಬಳಿಕ ಬೆಳಗಿನ ಜಾವ ಹೋಟೆಲ್‌ನಿಂದ ಹೊರಬಂದ ಯುವತಿ ನೇರವಾಗಿ ಮಡಿವಾಳ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ. ದೂರಿನ ಆಧಾರದ ಮೇಲೆ ಪೊಲೀಸರು ತಕ್ಷಣ ತನಿಖೆ ಆರಂಭಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಸದ್ಯ ಸಮೀರ್‌ನನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಪ್ರಕ್ರಿಯೆ ಬಳಿಕ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

TRENDING ARTICLES1 / 4
Show More

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories