Bengaluru Rains: ಬೆಂಗಳೂರಿನ ಅಂಡರ್‌ಪಾಸ್ ಜಲಾವೃತ, ನೀರಿನಲ್ಲಿ ತೇಲಾಡಿದ ಕಾರು! ದೃಶ್ಯ ವೈರಲ್

Bengaluru Rains: ಬೆಂಗಳೂರಿನ ಪೂರ್ವ ಭಾಗದಲ್ಲಿ ಸುರಿದ ದಿಢೀರ್ ಮಳೆಗೆ ಪಣತ್ತೂರು ರೈಲ್ವೆ ಅಂಡರ್‌ಪಾಸ್ ಜಲಾವೃತಗೊಂಡಿದ್ದು, ನೀರಿನಲ್ಲಿ ಕಾರು ತೇಲಾಡಿದ ದೃಶ್ಯ ವೈರಲ್ ಆಗಿದೆ. ವಾಹನ ಸಂಚಾರ ಸ್ಥಗಿತಗೊಂಡಿದ್ದು, ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (Bengaluru): ರಾಜಧಾನಿಯ ಪೂರ್ವ ಭಾಗದಲ್ಲಿ ಸುರಿದ ದಿಢೀರ್ ಮಳೆ ಜನಜೀವನದ ಮೇಲೆ ಪರಿಣಾಮ ಬೀರಿದೆ. ಪಣತ್ತೂರು ರೈಲ್ವೆ ಅಂಡರ್‌ಪಾಸ್ (Panathur Underpass) ಸಂಪೂರ್ಣವಾಗಿ ನೀರಿನಿಂದ ತುಂಬಿಕೊಂಡಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.

ಅಂಡರ್‌ಪಾಸ್‌ನಲ್ಲಿ ನಿಂತ ನೀರಿನ ನಡುವೆ ಕಾರೊಂದು ತೇಲಾಡಿದ (Car Floats in Water) ಆತಂಕಕಾರಿ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕೆಲವೇ ಗಂಟೆಗಳ ಕಾಲ ಸುರಿದ ಮಳೆಗೆ ಅಂಡರ್‌ಪಾಸ್ ಕೆರೆಯಂತಾಗಿದೆ. ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಇಲ್ಲದಿರುವುದರಿಂದ ಈ ಸಮಸ್ಯೆ ಉಂಟಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ರಾಜ್ಯದಲ್ಲಿ 3 ದಿನ ಭಾರೀ ಮಳೆ; ಬೆಂಗಳೂರು, ಹಾಸನ, ಕೊಡಗು ಸೇರಿ ಮುನ್ಸೂಚನೆ

ಈ ಹಿಂದೆ ಅಂಡರ್‌ಪಾಸ್‌ನಿಂದ ಮಳೆನೀರು ಹರಿದುಹೋಗಲು ಸಣ್ಣ ಚರಂಡಿ ಹಾಗೂ ಪೈಪ್‌ಲೈನ್‌ಗಳನ್ನು ಅಳವಡಿಸಲಾಗಿತ್ತು. ಆದರೆ, ಇತ್ತೀಚಿನ ಕಾಮಗಾರಿಯ ಸಂದರ್ಭದಲ್ಲಿ ಪೈಪ್‌ಲೈನ್‌ಗಳ ಮೇಲೆ ಮಣ್ಣಿನ ರಾಶಿ ಸುರಿದು ಮುಚ್ಚಲಾಗಿದೆ ಎನ್ನಲಾಗಿದೆ. ಇದರಿಂದ ನೀರು ಹರಿಯುವ ಮಾರ್ಗ ಬಂದ್ ಆಗಿ, ಮಳೆ ಸುರಿದ ಕೆಲವೇ ಸಮಯದಲ್ಲಿ ಅಂಡರ್‌ಪಾಸ್‌ನಲ್ಲಿ ನೀರು ಸಂಗ್ರಹವಾಗಿದೆ.

ಸದ್ಯ ಅಂಡರ್‌ಪಾಸ್‌ನಲ್ಲಿ ಭಾರೀ ಪ್ರಮಾಣದ ನೀರು ನಿಂತಿರುವುದರಿಂದ ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ವಾಹನ ಸವಾರರು ಮತ್ತು ಸ್ಥಳೀಯರು ತೊಂದರೆ ಅನುಭವಿಸುತ್ತಿದ್ದಾರೆ. ಮಳೆನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳದ ಜಿಬಿಎ (GBA) ಅಧಿಕಾರಿಗಳ ವಿರುದ್ಧ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories