Bengaluru Rain Update: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ
Bengaluru Weather Update: ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಮಳೆಯಾಗುವ (Bengaluru Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Bengaluru Rain Update: ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಮಳೆಯಾಗುವ (Bengaluru Weather) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲಿನ ಪ್ರಭಾವ ಹೆಚ್ಚುತ್ತಿದೆ. ಅಲ್ಲದೆ, ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಮುಗಿಲು ಮುಟ್ಟಿದೆ. ಬಿಸಿಲಿನ ತಾಪ ಹೆಚ್ಚಾದ ಕಾರಣ ಕಳೆದ ವಾರ ರಾಯಚೂರು, ಕಲಬುರಗಿ, ಬೆಂಗಳೂರಿನ ವಿವಿಧೆಡೆ ವ್ಯಾಪಕ ಮಳೆಯಾಗಿತ್ತು.
ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೂರು ದಿನ ಮಳೆ
ಈ ಪರಿಸ್ಥಿತಿಯಲ್ಲಿ ಮುಂದಿನ 3 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ (Rains on 3 days) ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಕುರಿತು ಹವಾಮಾನ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು:-
ಇಂದಿನಿಂದ (28ನೇ ತಾರೀಖು) 30ರವರೆಗೆ 3 ದಿನಗಳ ಕಾಲ ಬೆಂಗಳೂರು (Bengaluru), ಬೆಂಗಳೂರು ಗ್ರಾಮಾಂತರ (Bengaluru Rural), ಚಿಕ್ಕಬಳ್ಳಾಪುರ (Chikkaballapur), ಕೋಲಾರ (Kolar), ರಾಮನಗರ (Ramanagara), ಮಂಡ್ಯ (Mandya), ಹಾಸನ (Hassan) ಮತ್ತು ಮೈಸೂರು ಜಿಲ್ಲೆಗಳಲ್ಲಿ (Mysuru District) ಕೆಲವೆಡೆ ಗುಡುಗು ಸಹಿತ ಮಳೆಯಾಗುವ (Rain) ಸಾಧ್ಯತೆ ಇದೆ. ಅದೇ ರೀತಿ ಕೊಡಗು, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ 3 ದಿನ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.
Bengaluru Rain Update, Chance of rain in Bengaluru for 3 days