Bengaluru: ಬೆಂಗಳೂರು ನಡು ರಸ್ತೆಯಲ್ಲಿ ರಕ್ತಪಾತ; ಖಾರದ ಪುಡಿ ಎರಚಿ ರೌಡಿಶೀಟರ್ ಶಬ್ಬೀರ್ ಕೊಲೆ

ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಮಂಗಮ್ಮನಪಾಳ್ಯದಲ್ಲಿ ರೌಡಿಶೀಟರ್ ಮೊಹಮ್ಮದ್ ಶಬ್ಬೀರ್ ಮೇಲೆ ದುಷ್ಕರ್ಮಿಗಳು ಖಾರದ ಪುಡಿ ಎರಚಿ ಮಚ್ಚು–ಲಾಂಗ್‌ನಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

  • ರೌಡಿಶೀಟರ್ ಶಬ್ಬೀರ್ ಮೇಲೆ ನಡು ರಸ್ತೆಯಲ್ಲೇ ಭೀಕರ ದಾಳಿ
  • ಖಾರದ ಪುಡಿ ಎರಚಿ ಮಚ್ಚು, ಲಾಂಗ್ ಬಳಸಿ ಕೊಲೆ
  • ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಂಗಳೂರು (Bengaluru): ಬೆಂಗಳೂರು ನಗರದಲ್ಲಿ ನಡೆದ ಭೀಕರ ಹತ್ಯೆ ಪ್ರಕರಣ ಜನರಲ್ಲಿ ಆತಂಕ ಮೂಡಿಸಿದೆ. ಹಳೇ ದ್ವೇಷವೇ ಈ ಕೊಲೆಗೆ ಕಾರಣ ಎನ್ನಲಾಗುತ್ತಿದ್ದು, ನಡು ರಸ್ತೆಯಲ್ಲೇ ಯುವಕನನ್ನು ಅಟ್ಟಾಡಿಸಿ ಕೊಚ್ಚಿ ಹತ್ಯೆ ಮಾಡಲಾಗಿದೆ. ಘಟನೆ ನಗರದ ಮಂಗಮ್ಮನಪಾಳ್ಯ ವ್ಯಾಪ್ತಿಯಲ್ಲಿ ನಡೆದಿದೆ.

ಮಂಗಮ್ಮನಪಾಳ್ಯ ನಿವಾಸಿ, 28 ವರ್ಷದ ಮೊಹಮ್ಮದ್ ಶಬ್ಬೀರ್ ಎಂಬಾತನೇ ಹತ್ಯೆಯಾದ ವ್ಯಕ್ತಿ. ಈತ ರೌಡಿಶೀಟರ್ (Rowdy Sheeter Killed) ಆಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ರಾತ್ರಿ ಶಬ್ಬೀರ್ ತನ್ನ ಸ್ನೇಹಿತರೊಂದಿಗೆ ಆಟೋದಲ್ಲಿ ತೆರಳುತ್ತಿದ್ದ ವೇಳೆ, ಮಂಗಮ್ಮನಪಾಳ್ಯ ಮುಖ್ಯರಸ್ತೆಯ ತಿರುವಿನಲ್ಲಿ ದುಷ್ಕರ್ಮಿಗಳ ತಂಡ ದಾಳಿ ನಡೆಸಿದೆ.

ಖಾರದ ಪುಡಿ ಎರಚಿ ಅಟ್ಟಾಡಿಸಿ ದಾಳಿ

ಆರು ಮಂದಿ ಒಳಗೊಂಡ ತಂಡ ಏಕಾಏಕಿ ಖಾರದ ಪುಡಿ ಎರಚಿ ಶಬ್ಬೀರ್ ಹಾಗೂ ಆತನ ಸ್ನೇಹಿತರ ಮೇಲೆ ದಾಳಿ ನಡೆಸಿದೆ. ನಂತರ ಮಚ್ಚು ಹಾಗೂ ಲಾಂಗ್ ಬಳಸಿ ಅಟ್ಟಾಡಿಸಿ ನಿರ್ದಯವಾಗಿ ಹಲ್ಲೆ ನಡೆಸಲಾಗಿದೆ. ಗಂಭೀರ ಗಾಯಗೊಂಡ ಶಬ್ಬೀರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಈ ದಾಳಿಯಲ್ಲಿ ಶಬ್ಬೀರ್ ಜೊತೆಯಲ್ಲಿದ್ದ ಐವರು ಸ್ನೇಹಿತರು ಕೂಡ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ತನಿಖೆ ಆರಂಭ

ಘಟನೆಯ ಮಾಹಿತಿ ಪಡೆದ ಬಂಡೆಪಾಳ್ಯ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ಹಳೇ ದ್ವೇಷವೇ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ಈ ಸಂಬಂಧ ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English Summary▼

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories