ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ ಪ್ರಕರಣ; ಪತ್ನಿಗೆ ನೋಟಿಸ್
ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ (Atul Subhash) ಪ್ರಕರಣದ ತನಿಖೆಯನ್ನು ಬೆಂಗಳೂರು ನಗರ ಮಾರತ್ತಹಳ್ಳಿ ಪೊಲೀಸರು ತೀವ್ರಗೊಳಿಸಿದ್ದಾರೆ.
ಬೆಂಗಳೂರು (Bengaluru): ಪತ್ನಿಯ ಕಿರುಕುಳದಿಂದ 40 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ (Atul Subhash) ಪ್ರಕರಣದ ತನಿಖೆಯನ್ನು ಬೆಂಗಳೂರು ನಗರ ಮಾರತ್ತಹಳ್ಳಿ ಪೊಲೀಸರು ತೀವ್ರಗೊಳಿಸಿದ್ದಾರೆ.
ಅದರ ಭಾಗವಾಗಿ ತಲೆಮರೆಸಿಕೊಂಡಿರುವ ಪತ್ನಿ ನಿಕಿತಾ ಸಿಂಘಾನಿಯಾಗೆ ಸಮನ್ಸ್ ಜಾರಿ ಮಾಡಲಾಗಿದೆ. ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಅವರು ಇದೇ ತಿಂಗಳ 6 ರಂದು ಬೆಂಗಳೂರಿನ ಮಾರತ್ತಹಳ್ಳಿಯ ಮಂಜುನಾಥ್ ಲೇಔಟ್‌ನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತನ ಸಹೋದರನ ದೂರಿನ ಮೇರೆಗೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಶುಕ್ರವಾರ ಉತ್ತರ ಪ್ರದೇಶದ ಜೌನ್‌ಪುರದಲ್ಲಿರುವ ನಿಕಿತಾ ಸಿಂಘಾನಿಯಾ ಮನೆಗೆ ಹೋದಾಗ ಯಾರೂ ಇಲ್ಲದ ಕಾರಣ ಗೋಡೆಗೆ ನೋಟಿಸ್ ಅಂಟಿಸಲಾಗಿದೆ.
ಮೂರು ದಿನಗಳೊಳಗೆ ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ನಿಖಿತಾ, ತಾಯಿ ನಿಶಾ ನಿಂಘಾನಿಯಾ, ಕಿರಿಯ ಸಹೋದರ ಸುಶೀಲ್ ಸಿಂಘಾನಿಯಾ ಮತ್ತು ಸಹೋದರ ಅನುರಾಗ್ ಸಿಂಘಾನಿಯಾ ಅವರ ಹೆಸರನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದ್ದರೂ, ನಿಖಿತಾ ಮಾತ್ರ ವಿಚಾರಣೆಗೆ ಹಾಜರಾಗಬೇಕು ಎಂದು ಸಮನ್ಸ್‌ನಲ್ಲಿ ತಿಳಿಸಲಾಗಿದೆ.
ಪ್ರಕರಣದ ತನಿಖೆ ಕಟ್ಟುನಿಟ್ಟಾಗಿ ನಡೆಯುತ್ತಿದ್ದು, ಪ್ರಕರಣದಲ್ಲಿ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.
Bengaluru Techie Atul Subhash Case, Wife Summoned for Investigation