Welcome To Kannada News Today

ಬೆಂಗಳೂರು ತಂತ್ರಜ್ಞಾನ ಸಮಾವೇಶ 2020

ಬೆಂಗಳೂರು ತಂತ್ರಜ್ಞಾನ ಸಮಾವೇಶ 2020 ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಜಗದೀಶ್‌ ಶೆಟ್ಟರ್‌, ಕೈಗಾರಿಕೆಗಳ ಅಭಿವೃದ್ದಿಗೆ ನಿರ್ದಿಷ್ಟ ವಲಯ ನೀತಿಗಳನ್ನು ಹೊರತಂದಿರುವ ದೇಶದ ಮೊದಲ ರಾಜ್ಯ ಕರ್ನಾಟಕ ಎಂದರು

🌐 Kannada News :

ಬೆಂಗಳೂರು ತಂತ್ರಜ್ಞಾನ ಸಮಾವೇಶ 2020

( Kannada News Today ) : ಬೆಂಗಳೂರು : ರಾಜ್ಯದಲ್ಲಿ ನೂತನ ಕೈಗಾರಿಕೆಗಳನ್ನು ಸೆಳೆಯುಲು ಹಾಗೂ ಕೈಗಾರಿಕೆಗಳ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ನಿರ್ದಿಷ್ಟ ವಲಯ ನೀತಿಗಳನ್ನು ಘೋಷಿಸಿರುವ ದೇಶದ ಮೊದಲ ರಾಜ್ಯವಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಜಗದೀಶ ಶೆಟ್ಟರ್ ಹೇಳಿದರು.

ಬೆಂಗಳೂರು ತಂತ್ರಜ್ಞಾನ ಸಮಾವೇಶ 2020 ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಐಟಿ, ಬಿಟಿ, ಸ್ಟಾರ್ಟ ಅಪ್‌, ಎವಿಜಿಸಿ, ಈಎಸ್‌ಡಿಎಂ, ಎಲೆಕ್ಟ್ರಿಕ್‌ ವೆಹಿಕಲ್‌ ಹೀಗೆ ನಿರ್ದಿಷ್ಟ ವಲಯಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ನೀತಿಗಳನ್ನು ರೂಪಿಸಿದ ದೇಶದ ಮೊದಲ ರಾಜ್ಯವಾಗಿದೆ.

ಈ ಮೂಲಕ ನಿರ್ದಿಷ್ಟ ಕೈಗಾರಿಕಾ ವಲಯ ಹಾಗೂ ಕ್ಷೇತ್ರಗಳ ಅಭಿವೃದ್ದಿಗೆ ಬೇಕಾದಂತಹ ಕ್ರಮಗಳನ್ನು ಈ ನೀತಿಗಳಲ್ಲಿ ಅಳವಡಿಸಿಕೊಳ್ಳುವ ಮೂಲಕ ಕೈಗಾರಿಕಾಭಿವೃದ್ದಿಗೆ ಅನುಕೂಲ ಮಾಡಿಕೊಡಲಾಗಿದೆ.

ಕರ್ನಾಟಕ ರಾಜ್ಯ ಕೈಗಾರಿಕಾ ಸ್ನೇಹಿ ಕ್ರಮಗಳನ್ನು ಅಳವಡಿಸಿಕೊಳ್ಳುವ ಮೂಲಕ ಕೈಗಾರಿಕಾಭಿವೃದ್ದಿಗೆ ಒತ್ತು ನೀಡುತ್ತಿದೆ. ನೂತನ ಕೈಗಾರಿಕಾ ನೀತಿ, ಕೈಗಾರಿಕಾ ಸೌಲಭ್ಯ ತಿದ್ದುಪಡಿ ಅಧಿನಿಯಮ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಅನುಕೂಲವಾದಂತಹ ಪರಿಸರ ನಿರ್ಮಾಣಕ್ಕೆ ಒತ್ತು ನೀಡಿದೆ.

ಇದರ ಪರಿಣಾಮ ಕೋವಿಡ್‌ ಸಂಕಷ್ಟದ ಸಮಯದಲ್ಲೂ ಕೂಡಾ ರಾಜ್ಯಕ್ಕೆ ಬಂಡವಾಳ ಹರಿದು ಬಂದಿದೆ. 64 ಯೋಜನೆಗಳ ಮೂಲಕ ರಾಜ್ಯದಲ್ಲಿ 1.16 ಲಕ್ಷ ರೂಪಾಯಿಗಳ ಬಂಡವಾಳ ಹೂಡಿಕೆಯಾಗಿದ್ದು, ದೇಶದ ಒಟ್ಟಾರೆ ಶೇಕಡಾ 42 ರಷ್ಟು ಬಂಡವಾಳವನ್ನು ರಾಜ್ಯ ಆಕರ್ಷಿಸಿದೆ.

ಇದಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಳ್ಳುವತ್ತ ಹೆಚ್ಚಿನ ಆದ್ಯತೆ ನೀಡಿದೆ.

ದೇಶದ ಇನ್ನೋವೇಷನ್‌ ಇಂಡೆಕ್ಸ್‌ ನಲ್ಲಿ ಮೊದಲ ಸ್ಥಾನವನ್ನು ರಾಜ್ಯ ಹೊಂದಿದೆ. ಅಲ್ಲದೆ, ಬೆಂಗಳೂರು ನಗರ ದೇಶದ ಪ್ರಮುಖ ಸಂಶೋಧನೆ ಹಾಗೂ ಅಭಿವೃದ್ದಿಯ ಕೇಂದ್ರಗಳನ್ನು ಹೊಂದಿದೆ.

ರಾಜ್ಯ ಸರಕಾರ ಪ್ರಾಡಕ್ಟ್‌ ಸ್ಪೆಸಿಫಿಕ್‌ ಇಂಡಸ್ಟ್ರೀಯಲ್‌ ಕ್ಲಸ್ಟರ್‌ ಡೆವಲಪ್‌ಮೆಂಟ್‌ ಪ್ರೋಗ್ರಾಮ್‌ ನ್ನು ಪ್ರಾರಂಭಿಸಿದ್ದು, ರಾಜ್ಯದ ಎರಡನೇ ಹಾಗೂ ಮೂರನೇ ಹಂತದ ನಗರಗಳಿಗೆ ಕೈಗಾರಿಕೆಗಳನ್ನು ಸೆಳೆಯಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.

ಏಪ್ರಿಲ್‌ – ಜೂನ್‌ 2020 ರ ನಡುವೆ ರಾಜ್ಯ ಅತಿಹೆಚ್ಚು ವಿದೇಶಿ ಬಂಡವಾಳ ವನ್ನು ಆಕರ್ಷಿಸಿದೆ. ಇದು ರಾಜ್ಯ ಸರಕಾರ ಕೈಗಾರಿಕೆಗಳ ಅಭಿವೃದ್ದಿಗೆ ಕೈಗೊಂಡಿರುವ ಕ್ರಮಗಳ ಪರಿಣಾಮವಾಗಿದೆ ಎಂದು ಹೇಳಿದರು.

Web title : Bengaluru Technology Conference 2020

📣 ಇನ್ನಷ್ಟು ಕನ್ನಡ ಬೆಂಗಳೂರು ನ್ಯೂಸ್ ಗಳಿಗಾಗಿ Bangalore News in Kannada, ಲೇಟೆಸ್ಟ್ ಅಪ್ಡೇಟ್ ಗಳ Kannada News ಗಾಗಿ Facebook & Twitter ಅನುಸರಿಸಿ.

📲 Google News ಹಾಗೂ Kannada News Today App ಡೌನ್ಲೋಡ್ ಮಾಡಿಕೊಳ್ಳಿ.

Scroll Down To More News Today