ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ; ಉತ್ತರ ಕೇರಳದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ, ತಮಿಳುನಾಡಿನ 15 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ

- - - - - - - - - - - - - Story - - - - - - - - - - - - -

ಬೆಂಗಳೂರು (Bengaluru) : ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ (Bengaluru Rain) ತಂದ ಫೆಂಗಲ್ ಚಂಡಮಾರುತ ಮಂಗಳವಾರದ ವೇಳೆಗೆ (ಡಿಸೆಂಬರ್ 3, 2024) ಮತ್ತಷ್ಟು ದುರ್ಬಲಗೊಳ್ಳುವ ನಿರೀಕ್ಷೆಯಿದೆ. ರಾಜ್ಯದ 15 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಫೆಂಗಲ್ ಚಂಡಮಾರುತದಿಂದಾಗಿ ಬೆಂಗಳೂರು ಮತ್ತು ಕರ್ನಾಟಕದ (Karnataka Rain Update) ಇತರ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು IMD ಸೋಮವಾರ ತಿಳಿಸಿದೆ.

ಬೆಂಗಳೂರಿನಲ್ಲಿ ಭಾನುವಾರ ಸಂಜೆಯಿಂದ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳ ಪ್ರಕಾರ, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಸೋಮವಾರ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿತ್ತು, ಅಂತೆಯೇ ಮಂಗಳವಾರ ಲಘುವಾಗಿ ಸಾಧಾರಣ ಮಳೆಯಾಗುತ್ತದೆ ಎಂದು ಸೂಚಿಸಲಾಗಿದೆ.

ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ

Bengaluru to continue receiving moderate rainfall

Related Stories