ಬೆಂಗಳೂರು ನಗರದಲ್ಲಿ ಮತ್ತೆ ಜಾರಿಯಾಗಲಿದೆ ಟೋಯಿಂಗ್ ವ್ಯವಸ್ಥೆ

ಬೆಂಗಳೂರು ನಗರದಲ್ಲಿ ಟೋಯಿಂಗ್ ವ್ಯವಸ್ಥೆ ಜಾರಿಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದರು.

- - - - - - - - - - - - - Story - - - - - - - - - - - - -

ಬೆಂಗಳೂರು (Bengaluru): ಈ ಹಿಂದೆ ಟೋವಿಂಗ್ ವಿಚಾರದಲ್ಲಿ ಜನರು ಮತ್ತು ಸಂಚಾರಿ ಪೊಲೀಸರ ನಡುವೆ ಘರ್ಷಣೆ ಉಂಟಾಗಿ 2022ರ ಫೆಬ್ರವರಿಯಲ್ಲಿ ಸರ್ಕಾರ ರದ್ದುಗೊಳಿಸಿತ್ತು. ಆದರೆ ಬೆಂಗಳೂರು ನಗರದಲ್ಲಿ ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಯಾಗಲಿದೆ ಎಂಬ ಮಾಹಿತಿ ಇದೆ.

ಬೆಂಗಳೂರು ನಗರದಲ್ಲಿ ಟೋಯಿಂಗ್ ವ್ಯವಸ್ಥೆ ಜಾರಿಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದರು. ಶನಿವಾರ ಕೆಂಗೇರಿ ಉಪನಗರದ ಸಂಚಾರ ಸಂಪರ್ಕ ಕಚೇರಿಯಲ್ಲಿ ಜನರನ್ನುದ್ದೇಶಿಸಿ ಮಾತನಾಡಿದರು.

ಬೆಂಗಳೂರು ಹೆಡ್ ಕಾನ್‌ಸ್ಟೇಬಲ್ ತಿಪ್ಪಣ್ಣ ಪತ್ನಿ ಕಾಟದಿಂದ ಬೇಸತ್ತು ಆತ್ಮಹತ್ಯೆ

ಬೆಂಗಳೂರು ನಗರದಲ್ಲಿ ಮತ್ತೆ ಜಾರಿಯಾಗಲಿದೆ ಟೋಯಿಂಗ್ ವ್ಯವಸ್ಥೆ

ನಗರದಲ್ಲಿ ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡುವುದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಈ ಸಮಸ್ಯೆಯನ್ನು ಪರಿಹರಿಸಲು ಟೋಯಿಂಗ್ ವ್ಯವಸ್ಥೆಯನ್ನು ಮತ್ತೆ ಕಾರ್ಯರೂಪಕ್ಕೆ ತರಲು ಬಯಸುತ್ತೇವೆ ಎಂದು ಹೇಳಿದರು. ವಾಹನಗಳನ್ನು ಮನಸೋ ಇಚ್ಛೆ ನಿಲುಗಡೆ ಮಾಡಬಾರದು ಎಂದರು.

Bengaluru Towing System Likely to Be Reintroduced to Address Traffic Issues

Related Stories