ಹೊಸ ಬಿಪಿಎಲ್ ರೇಷನ್ ಕಾರ್ಡಿಗಾಗಿ ಕಾಯುತ್ತಿರುವವರಿಗೆ ಬಿಗ್ ಅಪ್ಡೇಟ್! ಸರ್ಕಾರದಿಂದ ಗುಡ್ ನ್ಯೂಸ್

ಹೊಸದಾಗಿ ರೇಷನ್ ಕಾರ್ಡ್ ಗೆ ಅಪ್ಲೈ ಮಾಡಬೇಕು ಎಂದು ಕಾಯುತ್ತಿದ್ದು, ಅಂಥವರಿಗೆ ಕೂಡ ಶೀಘ್ರದಲ್ಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ

ಈಗ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರೆ ನಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ (BPL Ration Card) ಇರಲೇಬೇಕು. ಬಡದವರಿಗೆ ನೀಡುವ ಈ ರೇಶನ್ ಕಾರ್ಡ್ ಇಂದ ಉಚಿತವಾಗಿ ಆಹಾರ ಧಾನ್ಯಗಳು, ಆರೋಗ್ಯ ಸೇವೆ, ಹಾಗೂ ಇನ್ನಿತರ ಸರ್ಕಾರದ ಸೌಲಭ್ಯಗಳನ್ನು ನೀಡಲಾಗುತ್ತದೆ.

ಈಗ ರಾಜ್ಯ ಸರ್ಕಾರದಲ್ಲಿ ಜಾರಿಗೆ ಬಂದಿರುವ 5 ಗ್ಯಾರೆಂಟಿ ಯೋಜನೆಗಳ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ (Ration Card) ಇರುವುದು ಕಡ್ಡಾಯ ಆಗಿದೆ. .

ಈ ರೂಲ್ಸ್ ಪಾಲಿಸಿದರೆ ಮಾತ್ರ ಜೂನ್ ತಿಂಗಳ ಅನ್ನಭಾಗ್ಯ ಯೋಜನೆ ಹಣ ಸಿಗೋದು! ಹೊಸ ಅಪ್ಡೇಟ್

ಈಗಾಗಲೇ ರೇಷನ್ ಕಾರ್ಡ್ ಹೊಂದಿರುವವರು ಈ ಎಲ್ಲಾ ಸೌಕರ್ಯಗಳನ್ನು ಪಡೆಯುತ್ತಿದ್ದಾರೆ. ಆದರೆ ರೇಷನ್ ಕಾರ್ಡ್ ಇಲ್ಲದವರು ಹೊಸದಾಗಿ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ. ಆದರೆ ಇನ್ನೂ ಕೂಡ ಈಗಾಗಲೇ ಅರ್ಜಿ ಸಲ್ಲಿಸಿರುವವರಿಗೆ ರೇಷನ್ ಕಾರ್ಡ್ ವಿತರಿಸಿಲ್ಲ.

ಅಂಥವರಿಗೆ ಈಗ ಸರ್ಕಾರದ ಕಡೆಯಿಂದ ಒಂದು ಗುಡ್ ನ್ಯೂಸ್ ಸಿಕ್ಕಿದ್ದು, ಆಹಾರ ಇಲಾಖೆಯ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಈ ಬಗ್ಗೆ ತಿಳಿಸಿದ್ದಾರೆ.

2023ರಲ್ಲಿ ವಿಧಾನಸಭಾ ಎಲೆಕ್ಷನ್ ನಡೆಯುವುದಕ್ಕಿಂತ ಮೊದಲೇ ಸುಮಾರು 2.30 ಲಕ್ಷ ಜನರು ತಮಗೆ ಹೊಸದಾಗಿ ರೇಷನ್ ಕಾರ್ಡ್ ಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಆದರೆ ಇನ್ನೂ ಕೂಡ ಅವರಿಗೆ ಹೊಸ ರೇಷನ್ ಕಾರ್ಡ್ ವಿತರಣೆ ಆಗಿಲ್ಲ. ಈ ಬಗ್ಗೆ ಸರ್ಕಾರ ಜನರಿಗೆ ಅನುಕೂಲ ಮತ್ತು ಸಹಾಯ ಅಗುವಂಥ ನಿರ್ಧಾರ ಒಂದನ್ನು ತೆಗೆದುಕೊಂಡಿದ್ದು, ಅದರ ಬಗ್ಗೆ ಇಂದು ತಿಳಿಯೋಣ..

ಫ್ರೀ ಅಂತ ಬೇಕಾಬಿಟ್ಟಿ ಕರೆಂಟ್ ಬಳಸೋಕು ಮುನ್ನ ಎಚ್ಚರ, ಗೃಹಜ್ಯೋತಿ ಯೋಜನೆಗೆ ಹೊಸ ರೂಲ್ಸ್

Ration Cardಆಹಾರ ಇಲಾಖೆಯ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೊಸ ರೇಷನ್ ಕಾರ್ಡ್ ವಿತರಣೆ ಮಾಡುವ ಬಗ್ಗೆ ಹೊಸ ಮಾಹಿತಿ ತಿಳಿಸಿದ್ದಾರೆ. 1 ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ತಮ್ಮ ರೇಷನ್ ಕಾರ್ಡ್ ಗಾಗಿ ಕಾಯುತ್ತಿರುವವರಿಗೆ ಇದು ಗುಡ್ ನ್ಯೂಸ್ ಆಗಿದ್ದು, ಪೆಂಡಿಂಗ್ ಇರುವ 2 ಲಕ್ಷಕ್ಕಿಂತ ಹೆಚ್ಚಿನ ರೇಷನ್ ಕಾರ್ಡ್ ಗಳನ್ನು ಈ ತಿಂಗಳು ಅಥವಾ ಜುಲೈ ನಲ್ಲಿ ವಿತರಣೆ ಮಾಡಲಾಗುತ್ತದೆ, ಜನರು ಇದರ ಲಾಭವನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಅನ್ನಭಾಗ್ಯ ಯೋಜನೆಯ ಹಣ ಇನ್ನು ನಿಮ್ಮ ಅಕೌಂಟ್ ಗೆ ಬಂದಿಲ್ವಾ? ಹಾಗಿದ್ದಲ್ಲಿ ಈ ಕೆಲಸ ಮಾಡಿ

ಹಾಗೆಯೇ ಇನ್ನಷ್ಟು ಜನರು ಮತ್ತೆ ಹೊಸದಾಗಿ ರೇಷನ್ ಕಾರ್ಡ್ ಗೆ ಅಪ್ಲೈ ಮಾಡಬೇಕು ಎಂದು ಕಾಯುತ್ತಿದ್ದು, ಅಂಥವರಿಗೆ ಕೂಡ ಶೀಘ್ರದಲ್ಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ರೀತಿಯಾಗಿ ಜನರ ಪ್ರಮುಖ ಸಮಸ್ಯೆಯನ್ನು ಸರ್ಕಾರ ಬಗೆಹರಿಸುವ ನಿರ್ಧಾರ ಮಾಡಿದ್ದು, ಜನರು ಇನ್ನುಮುಂದೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.

Big update for those who are waiting for new BPL ration card

Follow us On

FaceBook Google News