ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳ ಅರ್ಜಿ ಸಲ್ಲಿಕೆ ಕುರಿತು ಸಿಕ್ತು ದೊಡ್ಡ ಅಪ್ಡೇಟ್! ಇಲ್ಲಿದೆ ಮಾಹಿತಿ

2 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಹೊಸ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಅರ್ಜಿಗಳನ್ನು ಸಲ್ಲಿಸಿದ್ದರು ಸಹ ಅವರ ಪಡಿತರ ಕಾರ್ಡ್ ಇನ್ನು ಅವರ ಕೈ ಸೇರಿಲ್ಲ.

Bengaluru, Karnataka, India
Edited By: Satish Raj Goravigere

Ration Card : ದೇಶದಲ್ಲಿನ ಬಡ ಜನರು ಒಂದು ಹೊತ್ತು ಊಟಕ್ಕೆ ಪರದಾಡುತ್ತಿರುವುದನ್ನು ಗಮನಿಸಿದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರ ಹಸಿವನ್ನು ನೀಗಿಸುವ ಸಲುವಾಗಿ ಬಿಪಿಎಲ್ ಕಾರ್ಡ್ ಗಳನ್ನು (BPL Card) ಪರಿಚಯಿಸಿದ್ದಾರೆ.

ಇನ್ನು ಬಿಪಿಎಲ್ ಕಾರ್ಡ್ ಬಳಸಿಕೊಂಡು ಜನರು ಸರ್ಕಾರದ ನ್ಯಾಯಬೆಲೆ ಅಂಗಡಿಗಳಿಂದ ಉಚಿತ ಪಡಿತರವನ್ನು ಪಡೆಯಬಹುದಾಗಿದೆ. ಇನ್ನು ಅನೇಕರು ಇಂತಹ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ.

Big Update on New BPL Ration Card Application Submission, Here is the information

ಹೌದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯಾವುದೇ ಯೋಜನೆಗೆ ಅರ್ಜಿ ಸಲ್ಲಿಸಲು ಬಿಪಿಎಲ್ ಕಾರ್ಡ್ ಬಹಳ ಮುಖ್ಯವಾದ ದಾಖಲೆಗಳಲ್ಲಿ ಒಂದಾಗಿದೆ. ಇನ್ನು ಅನೇಕರ ಬಳಿ ಬಿಪಿಎಲ್ ಕಾರ್ಡ್ ಇಲ್ಲದೇ ಇರುವ ಕಾರಣದಿಂದ ಸರ್ಕಾರದ ಯೋಜನೆಗಳ ಸೌಲಭ್ಯಗಳಿಂದ ಅಂತವರು ವಂಚಿತರಾಗಿದ್ದಾರೆ. ಇನ್ನು ಕಳೆದ ಎರಡು ವರ್ಷಗಳಿಂದ ಹೊಸ ಬಿಪಿಎಲ್ ಕಾರ್ಡ್ ಮಾಡಿಸಲು ಸರ್ಕಾರವು ಯಾವುದೇ ಅರ್ಜಿಗಳನ್ನು ಬಿಡುಗಡೆ ಮಾಡಿಲ್ಲ.

ಗೃಹಲಕ್ಷ್ಮಿ 11ನೇ ಕಂತಿನ ಹಣ ಮೊದಲು ಈ ಜಿಲ್ಲೆಗಳಿಗೆ ಬಿಡುಗಡೆ; ಪಟ್ಟಿಯಲ್ಲಿ ನಿಮ್ಮ ಜಿಲ್ಲೆ ಇದ್ಯಾ ನೋಡಿ!

ಸುಮಾರು 2 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಹೊಸ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಅರ್ಜಿಗಳನ್ನು ಸಲ್ಲಿಸಿದ್ದರು ಸಹ ಅವರ ಪಡಿತರ ಕಾರ್ಡ್ ಇನ್ನು ಅವರ ಕೈ ಸೇರಿಲ್ಲ. ಇನ್ನು ನಾಲ್ಕೈದು ಲಕ್ಷ ಜನರು ಹೊಸ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಅರ್ಜಿಗಳನ್ನು ಸಲ್ಲಿಸುವುದಕ್ಕಾಗಿ ಕಾಯುತ್ತಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಾದ ಅನ್ನಭಾಗ್ಯ, ಹಾಗೂ ಗೃಹಲಕ್ಷ್ಮಿ ಯೋಜನೆ ಹಾಗೂ ಗ್ರಹ ಜ್ಯೋತಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಬಿಪಿಎಲ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಆದರೆ ಹೊಸ ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಲಾಗದೆ, ಜನರು ಸಾಕಷ್ಟು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಇನ್ಮುಂದೆ ಬೇಕಾಬಿಟ್ಟಿ ವಿದ್ಯುತ್ ಬಳಸುವ ಮುನ್ನ ಎಚ್ಚರ! ಗೃಹಜ್ಯೋತಿ ಯೋಜನೆ ಸೌಲಭ್ಯ ಕಟ್

Ration Cardಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 5 ಕೆ.ಜಿ ಅಕ್ಕಿಯ ಬದಲಿಗೆ ಪ್ರತಿ ಕೆಜಿಗೆ 34 ರೂಗಳಂತೆ ರಂತೆ 5 ಕೆಜಿ ಅಕ್ಕಿಗೆ 174 ರೂಗಳನ್ನು ಸರ್ಕಾರ ನೀಡುತ್ತಿದೆ. ಹಾಗೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮನೆಯ ಮಹಿಳಾ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2000ಗಳನ್ನು ಜಮಾ ಮಾಡಲಾಗುತ್ತಿದೆ.

ಇನ್ನು ಇದೇ ವೇಳೆ ಹೊಸ ಬಿಪಿಎಲ್ ಕಾರ್ಡ್ಗಳನ್ನು ವಿತರಿಸಿದರು ಸರ್ಕಾರಕ್ಕೆ ಬಾರಿ ಹೊರೆಯಾಗುತ್ತದೆ ಎನ್ನುವ ಕಾರಣದಿಂದ ಸರ್ಕಾರವು ಹೊಸ ಅರ್ಜಿಗಳ ಆಹ್ವಾನ ನೀಡದೆ ನೆಪ ನೀಡುತ್ತಿದೆ ಎನ್ನುವುದು ಅನೇಕರ ಅಭಿಪ್ರಾಯ.

ಅನ್ನಭಾಗ್ಯ ಹಣ ನಿಮ್ಮ ಬ್ಯಾಂಕ್ ಖಾತೆಗೆ ಇನ್ನೂ ವರ್ಗಾವಣೆ ಆಗದೇ ಇದ್ರೆ! ಏನು ಮಾಡಬೇಕು?

ಈಗಾಗಲೇ ಸುಮಾರು 2 ಲಕ್ಷಕ್ಕೂ ಹೆಚ್ಚು ಮಂದಿ ಹೊಸ ಬಿಪಿಎಲ್ ಕಾರ್ಡ್ ಪಡೆದುಕೊಳ್ಳುವ ಸಲುವಾಗಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಆದರೆ ರಾಜ್ಯ ಸರ್ಕಾರವು ಹೊಸ ಬಿಪಿಎಲ್ ಕಾರ್ಡ್ ವಿತರಣೆಯ ಬಗ್ಗೆ ಯಾವುದೇ ಮಾಹಿತಿ ನೀಡುತ್ತಿಲ್ಲ. ಈ ಅರ್ಜಿಗಳ ವಿಲೇಮಾರಿ ಮಾಡುವ ತನಕ ಹೊಸ ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿಗಳ ಆಹ್ವಾನ ಮಾಡಲಾಗುವುದಿಲ್ಲ ಎಂದು ಇತ್ತೀಚೆಗೆ ಸರ್ಕಾರದಿಂದ ಸುದ್ದಿ ಕೇಳಿ ಬಂದಿದೆ.

Big Update on New BPL Ration Card Application Submission, Here is the information