ಬೆಂಗಳೂರು: ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ! ಬೈಕ್ ಅಪ್ಪಚ್ಚಿ, ಸವಾರ ಸಾವು

ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

  • ಕೆಎಸ್ಆರ್‌ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ದುರ್ಮರಣ
  • ಮತ್ತೊಬ್ಬ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು
  • ಅಪಘಾತದಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

ಬೆಂಗಳೂರು (Bengaluru): ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ (Nelamangala) ತಾಲೂಕಿನ ಬೊಮ್ಮನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕೆಎಸ್ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇದರಿಂದ ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ ಅತೀ ವೇಗವಾಗಿ ಬಂದು, ಎದುರಿಗೆ ಬಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬೈಕ್ ಬಸ್ ಅಡಿಯಲ್ಲಿ ಸಿಲುಕಿ ಅಪ್ಪಚ್ಚಿಯಾಗಿದೆ.

ತಕ್ಷಣವೇ ಸ್ಥಳೀಯರು ಆಂಬುಲೆನ್ಸ್ ಮೂಲಕ ಗಾಯಾಳುವರನ್ನು ಆಸ್ಪತ್ರೆಗೆ ರವಾನಿಸಿದರೂ, ಓರ್ವ ಸವಾರ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.

ಉಚಿತ ವಿದ್ಯುತ್ ಜೊತೆಗೆ ಹಣ ಕೂಡ ಸರ್ಕಾರವೇ ಕೊಡುವ ಬಂಪರ್ ಯೋಜನೆ

ಅಪಘಾತದ ಪರಿಣಾಮ ಹೆದ್ದಾರಿಯಲ್ಲಿ ಕೆಲಕಾಲ ಭಾರೀ ಸಂಚಾರ ತಡೆ ಉಂಟಾಗಿತ್ತು. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Bike Rider Dies in KSRTC Bus Collision at Bengaluru Nelamangala

English Summary▼

TRENDING ARTICLES1 / 4
Show More

Kannada News Today

Kannada News Today Providing News, information & entertainment in Kannada Language, Since 2019. This Website reacts as a… More »

Related Stories