ಬೆಂಗಳೂರು: ಏರ್ ಇಂಡಿಯಾ ವಿಮಾನಕ್ಕೆ ಆಕಾಶದಲ್ಲೇ ಹಕ್ಕಿ ಡಿಕ್ಕಿ! ತಪ್ಪಿದ ಭಾರೀ ಅನಾಹುತ
ವಿಶಾಖಪಟ್ಟಣಂನಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದು, ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. 148 ಪ್ರಯಾಣಿಕರಿದ್ದ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿದ್ದು, ಸದ್ಯ ಪರಿಶೀಲನೆಗಾಗಿ ನಿಲುಗಡೆ ಮಾಡಲಾಗಿದೆ.
- ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ
- 148 ಪ್ರಯಾಣಿಕರಿದ್ದ ವಿಮಾನ ಸುರಕ್ಷಿತವಾಗಿ ಲ್ಯಾಂಡ್
ಬೆಂಗಳೂರು (Bengaluru): ವಿಶಾಖಪಟ್ಟಣಂನಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ (Air India Flight) ಹಕ್ಕಿ ಡಿಕ್ಕಿ ಹೊಡೆದ ಘಟನೆ ಅಕ್ಟೋಬರ್ 20ರಂದು ನಡೆದಿದೆ.
ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾದರೂ, ಪೈಲಟ್‌ಗಳು ವಿಮಾನವನ್ನು ಸುರಕ್ಷಿತವಾಗಿ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪದಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Kempegowda International Airport) ಆಗಮಿಸುತ್ತಿದ್ದ ವಿಮಾನಕ್ಕೆ ಈ ಘಟನೆ ಸಂಭವಿಸಿದೆ. 148 ಪ್ರಯಾಣಿಕರನ್ನು ಹೊತ್ತಿದ್ದ IX2065 ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.
ಇದನ್ನೂ ಓದಿ: ಮದ್ಯಪ್ರಿಯರೇ, ಬೆಂಗಳೂರಿನಲ್ಲಿ ನಾಳೆಯಿಂದ (ಅ.21) 3 ದಿನ ಮದ್ಯ ಮಾರಾಟ ನಿಷೇಧ
ಹಕ್ಕಿ ಡಿಕ್ಕಿಯಿಂದ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನವನ್ನು ವಿಮಾನ ನಿಲ್ದಾಣದ V49 ಸ್ಟ್ಯಾಂಡ್‌ನಲ್ಲಿ ನಿಲ್ಲಿಸಲಾಗಿದೆ. ವಿಮಾನದ ಸ್ಥಿತಿಗತಿ ಹಾಗೂ ತಾಂತ್ರಿಕ ಸಮಸ್ಯೆಯ ಕುರಿತು ಪರಿಶೀಲನೆ ನಡೆಸುವ ಅಗತ್ಯವಿದೆ.
ವಿಮಾನ ಸುರಕ್ಷಿತವಾಗಿ ಇಳಿದಿರುವುದರಿಂದ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ. ಹಕ್ಕಿ ಡಿಕ್ಕಿಯಿಂದ ಉಂಟಾದ ತಾಂತ್ರಿಕ ಸಮಸ್ಯೆಯ ಕುರಿತು ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ.
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.



