ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ, ಜೆಡಿಎಸ್ ಸಮ್ಮಿಶ್ರ ಸರ್ಕಾರ ಬರಲಿದೆ; ಹೆಚ್.ಡಿ.ಕುಮಾರಸ್ವಾಮಿ
ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರ ಬರಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ
ಬೆಂಗಳೂರು (Bengaluru): ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರ ಬರಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ. ಚೆನ್ನಪಟ್ಟಣದಲ್ಲಿ (Chennapatna) ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದರು.
ಈಗಿನ ಕಾಂಗ್ರೆಸ್ ಸರ್ಕಾರದ ಮೇಲೆ ಜನ ಆಕ್ರೋಶಗೊಂಡಿದ್ದಾರೆ. ಜಿಲ್ಲೆಯ ಹೆಸರು ಬದಲಿಸಿ, ಅತಿಕ್ರಮಣ ಮಾಡಿ ರಿಯಲ್ ಎಸ್ಟೇಟ್ ದಂಧೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ದರ್ಶನ್ ಜಾಮೀನು ವಿಚಾರ! ರೇಣುಕಾಸ್ವಾಮಿ ತಂದೆ ಹೇಳಿದ್ದೇನು ಗೊತ್ತಾ
ಚೆನ್ನಪಟ್ಟಣ-ರಾಮನಗರವನ್ನು ಅವಳಿ ನಗರಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಕಳೆದ ಲೋಕಸಭೆ ಚುನಾವಣೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ಮಂಡಳಿಯನ್ನು ಭ್ರಷ್ಟಗೊಳಿಸಿ ಮತಗಳನ್ನು ಖರೀದಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಚೆನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಅವರನ್ನು ಸೋಲಿಸಲು ಕಾಂಗ್ರೆಸ್ ನಾಯಕರು ದೊಡ್ಡ ಮಟ್ಟದಲ್ಲಿ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಆದರೆ ಜನರ ಅಭಿಮಾನದ ಮುಂದೆ ಇದೆಲ್ಲ ನಿರರ್ಥಕ, ಗೆಲುವು ಖಚಿತ ಎಂಬ ಭರವಸೆ ವ್ಯಕ್ತಪಡಿಸಿದರು.
BJP, JDS coalition government to come in Karnataka Says HD Kumaraswamy