ಬೆಂಗಳೂರು ವಾರಣಾಸಿ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ!

ವಾರಣಾಸಿಯಿಂದ ಬೆಂಗಳೂರು ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇರುವುದಾಗಿ ಬೆದರಿಕೆ ಹಾಕಿದ ಕೆನಡಾ ಪ್ರಯಾಣಿಕನನ್ನು ಬಂಧಿಸಲಾಯಿತು. ತಪಾಸಣೆ ನಂತರ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ.

  • ಕೆನಡಾ ಪ್ರಯಾಣಿಕನಿಂದ ಬಾಂಬ್ ಬೆದರಿಕೆ
  • ವಿಮಾನವನ್ನು ಬೇರೆಡೆ ಸ್ಥಳಾಂತರಿಸಿ ತಪಾಸಣೆ
  • ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ ಎಂದ ಅಧಿಕಾರಿಗಳು

ವಾರಣಾಸಿಯಿಂದ ಬೆಂಗಳೂರು (Bengaluru) ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ (Indigo Flight) ಬಾಂಬ್ ಇಟ್ಟಿರುವುದಾಗಿ ವಿದೇಶಿ ಪ್ರಯಾಣಿಕನೊಬ್ಬ ಹೇಳಿದ ನಂತರ ವಾರಣಾಸಿ ವಿಮಾನ ನಿಲ್ದಾಣದಲ್ಲಿ ಕ್ಷಣಿಕ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಶನಿವಾರ ರಾತ್ರಿ ನಡೆದ ಈ ಘಟನೆ ಸಂಬಂಧ, ಕೆನಡಾ ಮೂಲದ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಘಟನೆಯ ನಂತರ ತಕ್ಷಣವೇ ಇಂಡಿಗೋ ಸಿಬ್ಬಂದಿ ಬಾಂಬ್ ಬೆದರಿಕೆಯ ಮಾಹಿತಿ ಏರ್ ಟ್ರಾಫಿಕ್ ಕಂಟ್ರೋಲ್‌ಗೆ (ಎಟಿಸಿ) ನೀಡಿದ್ದಾರೆ. ಭದ್ರತಾ ಸಿಬ್ಬಂದಿ ಸಕಾಲದಲ್ಲಿ ಕ್ರಮ ಕೈಗೊಂಡು ವಿಮಾನವನ್ನು ಬೇರೆಡೆಗೆ ಸ್ಥಳಾಂತರಿಸಿ ಸಂಪೂರ್ಣ ತಪಾಸಣೆ ನಡೆಸಿದರು.

ತಪಾಸಣೆಯಲ್ಲಿ ಯಾವುದೇ ಬಾಂಬ್ ಅಥವಾ ಸ್ಫೋಟಕ ವಸ್ತು ಪತ್ತೆಯಾಗಿಲ್ಲ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಪುನೀತ್ ಗುಪ್ತಾ ತಿಳಿಸಿದ್ದಾರೆ. ಭದ್ರತಾ ನಿಯಮಾವಳಿಗಳ ಪ್ರಕಾರ ಎಲ್ಲಾ ಪರಿಶೀಲನೆಗಳು ಮುಗಿದ ನಂತರ, ವಿಮಾನವನ್ನು ಭಾನುವಾರ ಬೆಳಗ್ಗೆ ಬೆಂಗಳೂರಿಗೆ ಹೊರಡಲು ಅನುಮತಿ ನೀಡಲಾಯಿತು.

ಈ ಮಧ್ಯೆ, ಬಂಧಿತ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಸಂಗ್ರಹಿಸುವುದಾಗಿ ಮತ್ತು ವಿಸ್ತೃತ ತನಿಖೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Bomb Threat Panic in Indigo Flight

English Summary▼

TRENDING ARTICLES1 / 4
Show More

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories