ನಿಮ್ಮ ಬಿಪಿಎಲ್ ಕಾರ್ಡ್ ಆಕ್ಟಿವ್ ಇದ್ಯಾ? 20 ಲಕ್ಷ ರೇಷನ್ ಕಾರ್ಡ್ ಕ್ಯಾನ್ಸಲ್
ಬಿಪಿಎಲ್ ಪಡಿತರ ಚೀಟಿಗಳ ಪರಿಷ್ಕರಣೆ ಮಾಡಲಾಗುವುದು ಎಂದು ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು. ರಾಜ್ಯದಲ್ಲಿ 20 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
- ರಾಜ್ಯದಲ್ಲಿ 20 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳ ಅಂದಾಜು
- ಹೊಸ ಕಾರ್ಡ್‌ಗಾಗಿ ಭೌತಿಕ ಪರಿಶೀಲನೆ ಕಡ್ಡಾಯ – ಸಮಿತಿ ರಚನೆ
- ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಳ್ಳಲು ಇನ್ನೂ ಎರಡು ತಿಂಗಳು
ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣೆ – ಸರ್ಕಾರದ ಹೊಸ ತೀರ್ಮಾನ!
ಬೆಂಗಳೂರು (Bengaluru): ಕರ್ನಾಟಕ ರಾಜ್ಯದಲ್ಲಿ ಬಿಪಿಎಲ್ (BPL Card) ಪಡಿತರ ಚೀಟಿಗಳನ್ನು ಪರಿಷ್ಕರಿಸುವ ಕಾರ್ಯ ಮುಂದುವರಿಯುತ್ತಿದೆ. ಅಧಿವೇಶನ ಮುಗಿದ ಬಳಿಕ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ಪರಿಷ್ಕರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.
ಈ ಕುರಿತು ವಿಧಾನ ಪರಿಷತ್‌ನಲ್ಲಿ ಬಿಜೆಪಿ (BJP) ನಾಯಕ ಸಿ.ಟಿ. ರವಿ ಅವರ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯದಲ್ಲಿ ಒಟ್ಟು 1.10 ಕೋಟಿ ಬಿಪಿಎಲ್ ಕಾರ್ಡ್‌ಗಳ ಪೈಕಿ 20 ಲಕ್ಷ ಅನರ್ಹ ಪಡಿತರ ಚೀಟಿಗಳು (Ration Card) ಇರುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಕರ್ನಾಟಕ ಅಂಗನವಾಡಿ ಹುದ್ದೆಗಳ ನೇಮಕಾತಿ, 8ನೇ ತರಗತಿ ಪಾಸಾದವರಿಗೂ ಅವಕಾಶ
ಹೊಸ ಬಿಪಿಎಲ್ ಕಾರ್ಡ್‌ಗಾಗಿ ಕಡ್ಡಾಯ ಪರಿಶೀಲನೆ!
ನೂತನ ಬಿಪಿಎಲ್ ಕಾರ್ಡ್‌ಗಳ (New Ration Card) ಮಂಜೂರಿಗಾಗಿ ಭೌತಿಕ ಪರಿಶೀಲನೆ ಅಗತ್ಯ ಎಂದು ಸಚಿವರು ಹೇಳಿದ್ದಾರೆ. ಈ ಸಂಬಂಧ ಗ್ರಾಮ ಮಟ್ಟದಲ್ಲಿ ಪಿಡಿಒ (PDO), ಗ್ರಾಮ ಲೆಕ್ಕಾಧಿಕಾರಿ, ಪಂಚಾಯಿತಿ ಕಾರ್ಯದರ್ಶಿ, ಕಂದಾಯ ನಿರೀಕ್ಷಕರನ್ನು ಒಳಗೊಂಡ ಸಮಿತಿ ರಚಿಸಲಾಗುವುದು ಎಂದು ವಿವರಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನ ಈ ಭಾಗದಲ್ಲಿ ನಿಮ್ಮ ಮನೆ ಇದ್ಯಾ? ನೀವೇ ಕೋಟ್ಯಾಧಿಪತಿಗಳು
ಹಾಗೇ, 2023ರಿಂದ ಈವರೆಗೂ 2,95,986 ಅರ್ಜಿಗಳು ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿವೆ. ಇದರಲ್ಲಿ 2,04,760 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, ಉಳಿದ 91,000 ಅರ್ಜಿಗಳು ಪರಿಶೀಲನೆ ಹಂತದಲ್ಲಿವೆ. ಇದರಲ್ಲಿ ಸುಮಾರು 50,000-60,000 ಅನರ್ಹ ಅರ್ಜಿಗಳಾಗಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕರ್ನಾಟಕ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಉಚಿತ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸೌಲಭ್ಯ!
ಪರಿಷ್ಕರಣೆ ಪ್ರಕ್ರಿಯೆ ಎರಡು ತಿಂಗಳಲ್ಲಿ ಪೂರ್ಣ
ಅನರ್ಹ ಕಾರ್ಡ್‌ಗಳನ್ನು ಕೈಬಿಟ್ಟು, ಸರಿಯಾದ ಫಲಾನುಭವಿಗಳಿಗೆ ಕಾರ್ಡ್ ವಿತರಿಸುವ ಪ್ರಕ್ರಿಯೆ ಇನ್ನು ಎರಡು ತಿಂಗಳೊಳಗೆ ಸಂಪೂರ್ಣವಾಗಿ ಪೂರ್ಣಗೊಳ್ಳಲಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
BPL Card Verification to be Completed in Two Months
Our Whatsapp Channel is Live Now 👇