ಬೆಂಗಳೂರು: ರಾಜ್ಯದ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ
ರಾಜ್ಯದ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳಿಗೆ ಇದೇ ತಿಂಗಳ 13ರಂದು ನಡೆದ ಉಪಚುನಾವಣೆಗೆ ಇಂದು ಫಲಿತಾಂಶ
- ಉಪಚುನಾವಣೆ ಫಲಿತಾಂಶ, ಮತ ಎಣಿಕಗೆ ಸಿದ್ಧತೆ
- ಮತ ಎಣಿಕೆ ಬೆಳಿಗ್ಗೆ 6:45 ಕ್ಕೆ ಪ್ರಾರಂಭ
- 20 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ
ಬೆಂಗಳೂರು (Bengaluru): ಶನಿವಾರ ದೇಶದ ರಾಜಕೀಯ ಭವಿಷ್ಯವನ್ನು ನಿರ್ಧರಿಸುವ ಉಪಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳಿಗೆ ಇದೇ ತಿಂಗಳ 13ರಂದು ನಡೆದ ಉಪಚುನಾವಣೆಗೆ ಆಯೋಗವು ಮತ ಎಣಿಕೆ ಪ್ರಕ್ರಿಯೆಗಾಗಿ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.
ಎಕ್ಸಿಟ್ ಪೋಲ್ ಪ್ರಕಾರ, ಚನ್ನಪಟ್ಟಣ ಮತ್ತು ಶಿಗ್ಗಾವಿಯಲ್ಲಿ ಎನ್ ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದು, ಆದರೆ ಸಂಡೂರಿನಲ್ಲಿ ಕಾಂಗ್ರೆಸ್ ಜಯಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಆದರೂ, ನಿಜವಾದ ಫಲಿತಾಂಶದಲ್ಲಿ ಯಾರು ಗೆಲ್ಲುತ್ತಾರೆ ಎನ್ನುವುದನ್ನು ಕಾತರದಿಂದ ನಿರೀಕ್ಷಿಸಲಾಗುತ್ತಿದೆ.
ಮತ ಎಣಿಕೆ ಪ್ರಕ್ರಿಯೆ ಶನಿವಾರ ಬೆಳಿಗ್ಗೆ 6:45 ಕ್ಕೆ ಆರಂಭವಾಗಲಿದ್ದು, ಮೊದಲು ಅಂಚೆ ಮತಗಳ ಎಣಿಕೆ ನಡೆಯಲಿದೆ. ನಂತರ ಇವಿಎಂ ಯಂತ್ರಗಳ ಮತ ಎಣಿಕೆ ನಡೆಯುತ್ತದೆ.
ಸ್ಟ್ರಾಂಗ್ ರೂಂನಲ್ಲಿರುವ ಇವಿಎಂ ಯಂತ್ರಗಳನ್ನು ಬೆಳಗ್ಗೆ 6.45ಕ್ಕೆ ಹೊರತರಲಾಗುವುದು. ಸಂಜೆ 7.30ಕ್ಕೆ ಅಂಚೆ ಮತಗಳ ಮತ ಎಣಿಕೆ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಇವಿಎಂ ಮತಗಳ ಎಣಿಕೆ ನಡೆಯಲಿದೆ. ಒಟ್ಟು 20 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ. ಮತ ಎಣಿಕೆ ಕೇಂದ್ರಗಳನ್ನೂ ಚುನಾವಣಾ ಕೇಂದ್ರ ನಿರ್ಧರಿಸಿದೆ.
By-Election Results to be Announced on Saturday, Counting Begins