ಬೆಂಗಳೂರು: ಇಂದು ಮೂರು ಕ್ಷೇತ್ರಗಳಿಗೆ ಉಪಚುನಾವಣೆ, ಸಕಲ ಸಿದ್ಧತೆ
ಬೆಂಗಳೂರು (Bengaluru): ರಾಜ್ಯ ರಾಜಕಾರಣದ ಮೇಲೆ ಭಾರಿ ಪರಿಣಾಮ ಬೀರುವ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಇಂದು ಬುಧವಾರ ಉಪಚುನಾವಣೆ ನಡೆಯಲಿದೆ. ರಾಜ್ಯದ ಚೆನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.
ಇಲ್ಲಿನ ಶಾಸಕರು ಸಂಸದರಾಗಿ ಆಯ್ಕೆಯಾಗಿರುವುದರಿಂದ ಉಪಚುನಾವಣೆ ಬರುತ್ತಿರುವುದು ಗೊತ್ತೇ ಇದೆ. ಎಲ್ಲ ಮತದಾರರು ಮುಕ್ತವಾಗಿ ಮತ ಚಲಾಯಿಸುವಂತೆ ಚುನಾವಣಾ ಆಯೋಗ ಕರೆ ನೀಡಿದೆ.
ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗಿದೆ. ಒಂದೆಡೆ ಆಡಳಿತಾರೂಢ ಕಾಂಗ್ರೆಸ್, ಇನ್ನೊಂದೆಡೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಸ್ಪರ್ಧೆಯಲ್ಲಿದೆ. ಉಪಚುನಾವಣೆಯ ಸಾರ್ವಜನಿಕ ಪ್ರಚಾರ ಸೋಮವಾರ ಸಂಜೆ ಅಂತ್ಯಗೊಂಡಿದ್ದರೂ ಅಭ್ಯರ್ಥಿಗಳು ಹಾಗೂ ಸ್ಥಳೀಯ ಮುಖಂಡರು ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು.
ಕೊನೆಯವರೆಗೂ ಮತದಾರರ ಮನವೊಲಿಸುವ ಪ್ರಯತ್ನ ನಡೆದಿದೆ. ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ. ಮೂರು ಕ್ಷೇತ್ರಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
By-elections for three constituencies today
Our Whatsapp Channel is Live Now 👇