ಪುನೀತ್ ರಾಜ್ ಕುಮಾರ್ ನಿಧನಕ್ಕೆ ಗಣ್ಯರ ಸಂತಾಪ

ಕನ್ನಡದ ಖ್ಯಾತ ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಿಧನಕ್ಕೆ ಸಂತಾಪಗಳ ಮಹಾಪುರವೇ ಹರಿದು ಬಂದಿದೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ಪ್ರಮುಖ ಮುಖಂಡರು ತೀವ್ರ ಸಂತಾಪ ಸೂಚಿಸಿದ್ದಾರೆ.

🌐 Kannada News :

ಬೆಂಗಳೂರು: ಕನ್ನಡದ ಖ್ಯಾತ ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಿಧನಕ್ಕೆ ಸಂತಾಪಗಳ ಮಹಾಪುರವೇ ಹರಿದು ಬಂದಿದೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ, ಮತ್ತು ಎಸ್.ಎಂ.ಕೃಷ್ಣ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಹಲವು ಪ್ರಮುಖ ಮುಖಂಡರು ತೀವ್ರ ಸಂತಾಪ ಸೂಚಿಸಿದ್ದಾರೆ.

ಕನ್ನಡದ ಖ್ಯಾತನಟ ಶ್ರೀ ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದು ನಾನು ತೀವ್ರ ಆಘಾತಕ್ಕೆ ಒಳಗಾಗಿದ್ದೇನೆ. ಕನ್ನಡಿಗರ ಮೆಚ್ಚಿನ ನಟ ಅಪ್ಪು ನಿಧನದಿಂದ ಕನ್ನಡ ಹಾಗೂ ಕರ್ನಾಟಕಕ್ಕೆ ಅಪಾರ ನಷ್ಟ ವಾಗಿದ್ದು, ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಿ, ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ. : ಬಸವರಾಜ್ ಬೊಮ್ಮಾಯಿ

ಕನ್ನಡದ ಪ್ರತಿಭಾವಂತ ಯುವ ನಟ ಪುನೀತ್ ರಾಜಕುಮಾರ್ ಹಠಾತ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ನಟನಾ ಕೌಶಲದ ಜೊತೆ ಸರಳ-ಸಜ್ಜನಿಕೆಯ ನಡವಳಿಕೆಯಿಂದಲೂ ಕನ್ನಡಿಗರ ಮ‌ನೆ ಮಗನಂತಿದ್ದ ಪುನೀತ್ ಸಾವು ತುಂಬಿಬಾರದ ನಷ್ಟ…. : ಸಿದ್ದರಾಮಯ್ಯ


ಕನ್ನಡದ ಅತ್ಯಂತ ಪ್ರೀತಿಯ ಕಲಾವಿದ ಶ್ರೀ ಪುನೀತ್ ರಾಜಕುಮಾರ್ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ. ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ. ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. : ಹೆಚ್.ಡಿ. ದೇವೇಗೌಡ

➟ ☞ Kannada News Today ಸುದ್ದಿಗಾಗಿ FacebookTwitter ಅನುಸರಿಸಿ. Google News | News App ಡೌನ್ಲೋಡ್ ಮಾಡಿಕೊಳ್ಳಿ.
Scroll Down To More News Today