ಕರ್ನಾಟಕ ಕೊರೊನಾ ಪ್ರಕರಣಗಳು ಹೆಚ್ಚಳ, ಕಡ್ಡಾಯ ಕೋವಿಡ್ ಟೆಸ್ಟ್ ಸೂಚನೆ
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ತ್ವರಿತ ಕ್ರಮ ಕೈಗೊಂಡಿದೆ. ಉಸಿರಾಟ ಸಮಸ್ಯೆ ಇರುವವರಿಗೆ ಕಡ್ಡಾಯ ಕೋವಿಡ್ ಟೆಸ್ಟ್ ಸೂಚನೆ ನೀಡಲಾಗಿದೆ.

COVID-19 : ಕೊರೊನಾ ವೈರಸ್ (Coronavirus) ಮತ್ತೆ ತಲೆಎತ್ತುತ್ತಿರುವ ಪರಿಸ್ಥಿತಿಯಲ್ಲಿ ರಾಜ್ಯದ ಆರೋಗ್ಯ ಇಲಾಖೆ ಎಚ್ಚರಿಕೆ ಕ್ರಮ ಕೈಗೊಂಡಿದೆ. ಬೆಂಗಳೂರಿನಲ್ಲಿ (Bengaluru) ಸಕ್ರಿಯ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ ನಡೆಸಿದ್ದಾರೆ. ಸಾರ್ವಜನಿಕರಲ್ಲಿ ಭಯ ಹುಟ್ಟಬಾರದು, ಆದರೆ ಮುನ್ನೆಚ್ಚರಿಕೆ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.
ಕೋವಿಡ್ ರೋಗಲಕ್ಷಣಗಳು ಕಾಣಿಸುವ ಅಥವಾ ಉಸಿರಾಟ ಹಾಗೂ ಹೃದಯ ಸಮಸ್ಯೆ ಇರುವವರಿಂದ ಆಸ್ಪತ್ರೆಗಳು ಕಡ್ಡಾಯವಾಗಿ ಸ್ಯಾಂಪಲ್ ಕಲೆಕ್ಟ್ ಮಾಡಿ ಕೋವಿಡ್ ಟೆಸ್ಟ್ (Covid Test) ಮಾಡಬೇಕು ಎಂಬುದಾಗಿ ಸಚಿವರು ಸೂಚನೆ ನೀಡಿದ್ದಾರೆ.
ತಕ್ಷಣದ ಅಗತ್ಯಕ್ಕಾಗಿ ಆಸ್ಪತ್ರೆಗಳು ಒಂದು ತಿಂಗಳಿಗಾಗುವಷ್ಟು ಟೆಸ್ಟ್ ಕಿಟ್ (Test Kits) ಇರಿಸಿಕೊಳ್ಳಬೇಕೆಂಬ ಸೂಚನೆ ನೀಡಲಾಗಿದೆ. ಜನರು ಮಾರುಕಟ್ಟೆ, ಬಸ್ ನಿಲ್ದಾಣ ಮುಂತಾದ ಜನಸಂದಣಿಯಲ್ಲಿ ಮಾಸ್ಕ್ ಧರಿಸುವುದು ಉತ್ತಮ ಎಂಬುದಾಗಿ ಸಚಿವರು ಅಭಿಪ್ರಾಯಪಟ್ಟಿದ್ದಾರೆ.
ಆರೋಗ್ಯ ಇಲಾಖೆಯು ಮೇ 25 ರಿಂದ ರಾಜ್ಯದ ಎಂಟು ಮೆಡಿಕಲ್ ಕಾಲೇಜುಗಳಲ್ಲಿ ಮತ್ತೆ ಕೋವಿಡ್ ಟೆಸ್ಟ್ ಆರಂಭಿಸಲು ನಿರ್ಧರಿಸಿದೆ. ಈ ಬಾರಿ ಹೆಚ್ಚಿನ ತನಿಖೆಗಳನ್ನು ಬೆಂಗಳೂರಿನಲ್ಲಿ ನಡೆಸುವ ಆದೇಶ ನೀಡಲಾಗಿದೆ. ತಾಂತ್ರಿಕ ಸಮಿತಿಯ ಸದಸ್ಯರು ಸರ್ಕಾರಕ್ಕೆ ಮುಂದಿನ ಹಂತದ ಮಾರ್ಗಸೂಚಿಗಳನ್ನು ನೀಡುತ್ತಿದ್ದಾರೆ.
ಇದೀಗ ಹೊಸಕೋಟೆಯಲ್ಲಿ (Bengaluru, Hoskote) ಒಂಬತ್ತು ತಿಂಗಳ ಮಗುವಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ ಎಂಬುದೇ ಹೆದರಿಕೆಗೆ ಕಾರಣವಾಗಿದೆ. ಮೇ 22ರಂದು ಮಾಡಿದ ರಾಪಿಡ್ ಆಂಟಿಜೆನ್ ಟೆಸ್ಟ್‌ನಲ್ಲಿ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ದೃಢಪಡಿಸಿದ್ದಾರೆ.
ಮಗುವನ್ನು ಆರಂಭದಲ್ಲಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮಗುವಿನ ಆರೋಗ್ಯ ಸ್ಥಿರವಾಗಿದ್ದು ವೈದ್ಯಕೀಯ ತಂಡ ನಿರಂತರ ತಪಾಸಣೆ ನಡೆಸುತ್ತಿದೆ.
COVID-19 concern rises again in Karnataka



