ಬೆಂಗಳೂರು ಹೊಸಕೋಟೆಯ 9 ತಿಂಗಳ ಮಗುವಿಗೆ ಕೋವಿಡ್ ಸೋಂಕು ದೃಢ
COVID-19 : ಕೋವಿಡ್ ಪ್ರಕರಣಗಳು ದೇಶಾದ್ಯಂತ ಮತ್ತೆ ಹೆಚ್ಚಳವಾಗುತ್ತಿದ್ದು, ಬೆಂಗಳೂರಿನಲ್ಲಿ ಮಗುವಿಗೆ ಸೋಂಕು ದೃಢಪಟ್ಟಿದೆ. ಕೇರಳ ಹಾಗೂ ಆಂಧ್ರಪ್ರದೇಶದಲ್ಲಿ ಸತತವಾಗಿ ಪ್ರಕರಣಗಳ ಸಂಖ್ಯೆಯು ಹೆಚ್ಚುತ್ತಿದೆ
- ಬೆಂಗಳೂರಿನಲ್ಲಿ 9 ತಿಂಗಳ ಮಗುವಿಗೆ ಕೋವಿಡ್ ದೃಢ
- ಕೇರಳದಲ್ಲಿ ಮೇ ತಿಂಗಳಲ್ಲಿ 182 ಹೊಸ ಪ್ರಕರಣಗಳು
- ಕೇರಳ ಹಾಗೂ ಆಂಧ್ರಪ್ರದೇಶದಲ್ಲಿ ಪ್ರಕರಣಗಳು ಹೆಚ್ಚಳ
ಬೆಂಗಳೂರು (Bengaluru): ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿವೆ. (COVID-19 precautions) ಜನಸಂಚಾರ ಹೆಚ್ಚು ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಮತ್ತು ಸಾಮೂಹಿಕ ಕೂಟ ತಪ್ಪಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.
ಹೌದು, ದೇಶದಲ್ಲಿ ಕೊರೊನಾ ಪ್ರಕರಣಗಳು ನಿಧಾನವಾಗಿ ಹೆಚ್ಚುತ್ತಿವೆ. ಹಲವಾರು ರಾಜ್ಯಗಳಲ್ಲಿ ಕೋವಿಡ್ -19 ರ ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬರುತ್ತಿವೆ.
ಇದೀಗ ಬೆಂಗಳೂರಿನ ಹೊಸಕೋಟೆಯ (Bengaluru, Hoskote) 9 ತಿಂಗಳ ಮಗುವಿಗೆ ಸೋಂಕು (COVID-19) ದೃಢಪಟ್ಟಿದ್ದು, ಮಕ್ಕಳಲ್ಲಿ ಕೂಡ ಸೋಂಕು ಹರಡುವಿಕೆಯ ಭೀತಿ ಹೆಚ್ಚಿದೆ. ಆರಂಭದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ನಂತರ ಮಗುವನ್ನು ವಾಣಿ ವಿಲಾಸ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಮೇ 22 ರಂದು ಈ ಪ್ರಕರಣ ದೃಢಪಟ್ಟಿದ್ದು, ಮಗುವಿನ ಆರೋಗ್ಯ ಸ್ಥಿರವಾಗಿದ್ದು ತಾತ್ಕಾಲಿಕ ಆತಂಕದ ಅವಶ್ಯಕತೆ ಇಲ್ಲ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಈ ಮದ್ಯೆ ಎಲ್ಲಾ ರಾಜ್ಯಗಳಲ್ಲಿಯೂ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ವಿಶೇಷವಾಗಿ ರೈಲು ನಿಲ್ದಾಣ, ಬಸ್ ನಿಲ್ದಾಣ ಮತ್ತು ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಬೇಕು. (public advisory) ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇತ್ತ ಕೇರಳದಲ್ಲಿಯೂ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಮೇ ತಿಂಗಳಲ್ಲಿ 182 ಹೊಸ ಪ್ರಕರಣಗಳು ದಾಖಲಾಗಿದ್ದು, ಕೊಟ್ಟಾಯಂ (57), ಎರ್ನಾಕುಲಂ (34), ತಿರುವನಂತಪುರಂ (30) ಜಿಲ್ಲೆಗಳು ಅತಿ ಹೆಚ್ಚು ಪ್ರಕರಣಗಳನ್ನು ನೋಂದಾಯಿಸಿವೆ. ಆರೋಗ್ಯ ಸಚಿವೆ ವೀಣಾ ಜಾರ್ಜ್ ಈ ಕುರಿತು ಜಾಗೃತಿಯನ್ನು ನೀಡಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಹೇಳಿದ್ದಾರೆ.
COVID Cases Rise, Infant Tests Positive in Bengaluru








