ಕರ್ನಾಟಕ ಕೋವಿಡ್ ಅಪ್ಡೇಟ್: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
ಕೋವಿಡ್ ಪ್ರಕರಣಗಳು ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಕ್ಕಳಿಂದ ಹಿರಿಯರ ತನಕ ಮುನ್ನೆಚ್ಚರಿಕೆ ಪಾಲನೆಗೆ ಸೂಚನೆ ನೀಡಲಾಗಿದೆ.

- ಕರ್ನಾಟಕ ರಾಜ್ಯದಲ್ಲಿ 35 ಸಕ್ರಿಯ ಪ್ರಕರಣಗಳು
- ಬೆಂಗಳೂರಿನಲ್ಲೆ ಹೆಚ್ಚು ಸೋಂಕು ಪ್ರಕರಣ
- ಮಕ್ಕಳ ಆರೋಗ್ಯದತ್ತ ವಿಶೇಷ ಗಮನಕ್ಕೆ ಸೂಚನೆ
ಬೆಂಗಳೂರು (Bengaluru): ಬೆಂಗಳೂರಿನಲ್ಲಿ ಮತ್ತೆ ಕೊರೊನಾ (Coronavirus) ಪ್ರಕರಣಗಳ ಸಂಖ್ಯೆ ಏರಿಕೆ ಕಾಣುತ್ತಿದೆ. ಕಳೆದ 20 ದಿನಗಳಲ್ಲಿ ಸೋಂಕು (Covid-19) ಪ್ರಮಾಣದಲ್ಲಿ ಏರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಮಕ್ಕಳಿಂದ ಹಿಡಿದು ವೃದ್ಧರ ತನಕ ಎಲ್ಲರೂ ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಲಾಗಿದೆ.
ಹೊಸಕೋಟೆಯಲ್ಲಿ ಒಂಬತ್ತು ತಿಂಗಳ ಮಗುವಿಗೆ ಕೋವಿಡ್ ದೃಢಪಟ್ಟ ಪ್ರಕರಣ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಮಗುವನ್ನು ಮೊದಲು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಾಣಿ ವಿಲಾಸ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇದೀಗ ಶಿಶುವಿನ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು ಸೇರಿ ಕರ್ನಾಟಕ, ಕೇರಳ, ಗೋವಾಗೆ ರೆಡ್ ಅಲರ್ಟ್; ಭಾರೀ ಮಳೆ ಸೂಚನೆ
ಕೋವಿಡ್ (COVID-19 guidelines) ಸೋಂಕು ಹರಡುವುದನ್ನು ತಡೆಯಲು ರಾಜ್ಯ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ತಕ್ಷಣದ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ವಿನಂತಿಸಿದೆ. ಮಾಸ್ಕ್ (Face Mask), ಹ್ಯಾಂಡ್ ಸ್ಯಾನಿಟೈಸರ್, ಸಾಮಾಜಿಕ ಅಂತರ ಪಾಲನೆ ಮುಖ್ಯವಾಗಿದೆ.
ಅಧಿಕೃತ ಅಂಕಿಅಂಶಗಳ ಪ್ರಕಾರ, ಈವರೆಗೆ 2025ರಲ್ಲಿ ಕರ್ನಾಟಕದಲ್ಲಿ ಕೋವಿಡ್ (Karnataka Corona) ಸಂಬಂಧಿತ ಸಾವು ಸಂಭವಿಸಿಲ್ಲ. ಆದರೆ ಸೋಂಕು ಹರಡುವ ಭೀತಿ ಇರುವುದರಿಂದ ಮುನ್ನೆಚ್ಚರಿಕೆಗೆ ಕೊರತೆಯಾಗಬಾರದು ಎಂಬುದು ಆರೋಗ್ಯ ಇಲಾಖೆಯ ಹಿತವಚನವಾಗಿದೆ.
ಮೇ 21ರ ವೇಳೆಗೆ ರಾಜ್ಯದಲ್ಲಿ 16 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಆದರೆ ಈಗ ಈ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ: ಕರ್ನಾಟಕ ಕೊರೊನಾ ಪ್ರಕರಣಗಳು ಹೆಚ್ಚಳ, ಕಡ್ಡಾಯ ಕೋವಿಡ್ ಟೆಸ್ಟ್ ಸೂಚನೆ
ಬೆಂಗಳೂರು ಮಾತ್ರದಲ್ಲಿ 32 ಪ್ರಕರಣಗಳು ದೃಢಪಟ್ಟಿದ್ದು, ನಗರದಲ್ಲಿ ಸೋಂಕು ತೀವ್ರಗೊಂಡಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ರಾಷ್ಟ್ರೀಯವಾಗಿ, ಭಾರತದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಮೇ 19 ರ ವೇಳೆಗೆ 257 ರಷ್ಟಿದೆ.
ಉಸಿರಾಟದ ತೊಂದರೆ, ಜ್ವರ, ಗಂಟಲಿನಲ್ಲಿ ನೋವು ಕಂಡುಬಂದರೆ ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಬೇಕು. ವಿಶೇಷವಾಗಿ ಗರ್ಭಿಣಿಯರು, ಹಿರಿಯರು ಮತ್ತು ಕಾಯಿಲೆಗಳಿಂದ ಬಳಲುತ್ತಿರುವವರು ಜನಸಂಚಾರದಿಂದ ದೂರವಿರಬೇಕು. ಈಗಲೇ ಎಚ್ಚರಿಕೆಯಿಂದ ನಡೆದುಕೊಂಡರೆ ಮುಂದೆ ಯಾವುದೇ ಸೋಂಕು ಹರಡುವುದಿಲ್ಲ.
Covid Cases Rising Again in Bengaluru








