Breaking: ನಟ ದರ್ಶನ್​ಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು

Story Highlights

ನಟ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ, ಕರ್ನಾಟಕ ರಾಜ್ಯ ಹೈಕೋರ್ಟ್ ದರ್ಶನ್​ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು (Bengaluru): ನಟ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ, ಹೌದು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳಾರಿ ಜೈಲು ಪಾಲಾಗಿದ್ದ ನಟ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದು ಕೊಂಡಿದ್ದಾರೆ. ಅವರಿಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು (granted interim bail) ಮಾಡಲಾಗಿದೆ.

ನಟ ದರ್ಶನ್ ತೂಗುದೀಪ ಅವರಿಗೆ ಕರ್ನಾಟಕ ಹೈಕೋರ್ಟ್ ಆರು ವಾರಗಳ ಮಧ್ಯಂತರ ಜಾಮೀನು ನೀಡಿದೆ.

ದರ್ಶನ್ (Darshan Thoogudeepa) ಪರ ವಕೀಲರು ಆರೋಗ್ಯದ ದೃಷ್ಟಿಯಿಂದ ಜಾಮೀನು ನೀಡಬೇಕಾಗಿ ವಾದ ಮಂಡಿಸಿದ್ದರು. ವಾದ ಆಲಿಸಿದ ಕರ್ನಾಟಕ ರಾಜ್ಯ ಹೈಕೋರ್ಟ್ ದರ್ಶನ್​ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಮಧ್ಯಂತರ ಜಾಮೀನು ಮಂಜೂರು

ದರ್ಶನ್ ತೂಗುದೀಪ ಅವರಿಗೆ ಏಕಸದಸ್ಯ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರು ಜಾಮೀನು ನೀಡಿದ್ದು, ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಬಹುದು ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗಾಗಿ ಅವರು ಮಧ್ಯಂತರ ಜಾಮೀನು ಕೋರಿದ್ದರು ಮತ್ತು ವೈದ್ಯಕೀಯ ಪರೀಕ್ಷೆಯ ವರದಿಯನ್ನು ನೀಡುವಂತೆ ನ್ಯಾಯಾಲಯವು ಅಧಿಕಾರಿಗಳಿಗೆ ಸೂಚಿಸಿತ್ತು. ಫಿಸಿಯೋಥೆರಪಿ ಅಥವಾ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಗಬಹುದು ಎಂದು ವರದಿ ಸೂಚಿಸಿದೆ.

Actor Darshan Thoogudeepaಪ್ರಕರಣದಲ್ಲಿ ತನಗೆ ಜಾಮೀನು ನಿರಾಕರಿಸಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಅವರು ಸಾಮಾನ್ಯ ಜಾಮೀನು ಕೋರಿ ಸಲ್ಲಿಸಿರುವ ಮತ್ತೊಂದು ಅರ್ಜಿಯು ಹೈಕೋರ್ಟ್‌ನಲ್ಲಿ ಇನ್ನೂ ವಿಚಾರಣೆಗೆ ಬಾಕಿ ಇದೆ.

Darshan Thoogudeepa granted interim bail from Karnataka High court

Related Stories