Welcome To Kannada News Today

ಬೆಂಗಳೂರು ಗ್ರಾಮಾಂತರ: ಪಕ್ಷ ರಹಿತ ಗ್ರಾಪಂ ಚುನಾವಣೆಗೆ ಡಿಸಿ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೊದಲನೇ ಹಂತದಲ್ಲಿ ಹೊಸಕೋಟೆ ಮತ್ತು ನೆಲಮಂಗಲ ತಾಲೂಕುಗಳಲ್ಲಿ ಹಾಗೂ ಎರಡನೇ ಹಂತದಲ್ಲಿ ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ತಾಲೂಕುಗಳಲ್ಲಿ ಅವಧಿ ಮುಕ್ತಾಯವಾಗಿರುವ ಗ್ರಾಮ ಪಂಚಾಯಿತಿಗಳ ಸದಸ್ಯರುಗಳ ಸ್ಥಾನಗಳಿಗೆ ಸಾರ್ವತ್ರಿಕ ಚುನಾವಣೆ

🌐 Kannada News :

(Kannada News) : ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೊದಲನೇ ಹಂತದಲ್ಲಿ ಹೊಸಕೋಟೆ ಮತ್ತು ನೆಲಮಂಗಲ ತಾಲೂಕುಗಳಲ್ಲಿ ಹಾಗೂ ಎರಡನೇ ಹಂತದಲ್ಲಿ ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ತಾಲೂಕುಗಳಲ್ಲಿ ಅವಧಿ ಮುಕ್ತಾಯವಾಗಿರುವ ಗ್ರಾಮ ಪಂಚಾಯಿತಿಗಳ ಸದಸ್ಯರುಗಳ ಸ್ಥಾನಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದ್ದು, ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಪಕ್ಷ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಪಕ್ಷರಹಿತ ಚುನಾವಣೆಯನ್ನು ಯಶಸ್ವಿಗೊಳಿಸಲು ರಾಜಕೀಯ ಪಕ್ಷಗಳು ಸಭೆ-ಸಮಾರಂಭಗಳನ್ನು ಏರ್ಪಡಿಸಿ, ವೇದಿಕೆಯ ಮೇಲೆ ಪಕ್ಷದ ಬಾವುಟ, ಬ್ಯಾನರ್‌ಗಳನ್ನು ಬಳಸುವಂತಿಲ್ಲ.

ಸ್ಫರ್ಧಿಸುವ ಅಭ್ಯರ್ಥಿಗಳು ತಮ್ಮ ಪಕ್ಷದ ಅಥವಾ ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು ಹಾಗೂ ಅವರ ಪರವಾಗಿ ಮತ ನೀಡಲು ಮತದಾರರನ್ನು ಕೋರುವಂತಿಲ್ಲ ಎಂದಿದ್ದಾರೆ.

ಚುನಾವಣೆಗೆ ಸ್ಫರ್ಧಿಸಿರುವ ಅಭ್ಯರ್ಥಿಗಳು, ರಾಜಕೀಯ ಮುಖಂಡರ ಭಾವಚಿತ್ರ ಅಥವಾ ಪಕ್ಷದ ಚಿಹ್ನೆ ಇರುವ ಕರಪತ್ರಗಳನ್ನು ಮುದ್ರಿಸುವುದು ಅಥವಾ ಹಂಚುವುದು ಮಾಡುವಂತಿಲ್ಲ.

ರಾಜಕೀಯ ಮುಖಂಡರ ಭಾವಚಿತ್ರ ರಾಜಕೀಯ ಪಕ್ಷಗಳ ಚಿಹ್ನೆ ಇರುವ ಕರಪತ್ರಗಳು, ಕಟೌಟ್‌ಗಳು, ಬ್ಯಾನರ್ ಮತ್ತು ಬಂಟಿಂಗ್‌ಗಳ ಮೂಲಕ ಪ್ರಚಾರ ಮಾಡುವಂತಿಲ್ಲ ಹಾಗೂ ಚುನಾವಣೆಗೆ ಸ್ಫರ್ಧಿಸಿರುವ ಅಭ್ಯರ್ಥಿಗಳು, ಟಿ.ವಿ ಮಾಧ್ಯಮಗಳು, ಪತ್ರಿಕೆಗಳ ಮೂಲಕ ರಾಜಕೀಯ ಮುಖಂಡರ ಭಾವಚಿತ್ರ ಮತ್ತು ಪಕ್ಷಗಳ ಚಿಹ್ನೆಯನ್ನು ಬಳಸಿ ಜಾಹೀರಾತು ನೀಡುವಂತಿಲ್ಲ ಎಂದು ಸೂಚಿಸಿದ್ದಾರೆ.

ಇಂತಹ ಪ್ರಕರಣಗಳು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಉಲ್ಲಂಘನೆಯಾಗಿರುವುದು ಕಂಡು ಬಂದಲ್ಲಿ ಅಂತಹ ಚುನಾವಣಾ ಪ್ರಚಾರ ಸಾಮಗ್ರಿಗಳನ್ನು ಮುಟ್ಟುಗೋಲು ಹಾಕಿಕೊಂಡು, ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Web Title : DC steps for non-party Gram Panchayat election

Web Title :

Get Latest Kannada News an up-to-date news coverage

ಕ್ಷಣ ಕ್ಷಣದ ಕನ್ನಡ ಸುದ್ದಿಗಳಿಗಾಗಿ FacebookTwitterYouTube ಅನುಸರಿಸಿ.