Bengaluru: ಬೆಂಗಳೂರು ಕೆಆರ್ ಪುರಂನಲ್ಲಿ ಹಿಟ್ & ರನ್ ದುರಂತ; ಡೆಲಿವರಿ ಬಾಯ್ ಸಾವು

ಬೆಂಗಳೂರು ಕೆಆರ್ ಪುರಂ ಭಟ್ಟರಹಳ್ಳಿ ಸಿಗ್ನಲ್ ಬಳಿ ಕಾರು ಡಿಕ್ಕಿಯಾಗಿ ಪರಾರಿಯಾದ ಹಿಟ್ & ರನ್ ಪ್ರಕರಣದಲ್ಲಿ ನೇಪಾಳ ಮೂಲದ ಡೆಲಿವರಿ ಬಾಯ್ ಸ್ಥಳದಲ್ಲೇ ಮೃತಪಟ್ಟಿರುವುದು ತೀವ್ರ ಆಘಾತ ತಂದಿದೆ.

  • ಕೆಆರ್ ಪುರಂ ಹಿಟ್ & ರನ್‌ನಲ್ಲಿ ಡೆಲಿವರಿ ಬಾಯ್ ಸಾವು
  • ಭಟ್ಟರಹಳ್ಳಿ ಸಿಗ್ನಲ್ ಬಳಿ ಕಾರು ಡಿಕ್ಕಿ ಹೊಡೆದು ಪರಾರಿ
  • ಹಿಟ್ & ರನ್ ದೃಶ್ಯ ಸಿಸಿಟಿವಿಯಲ್ಲಿ ದಾಖಲು

ಬೆಂಗಳೂರು (Bengaluru): ನಗರದಲ್ಲಿ ಹಿಟ್ & ರನ್ ಪ್ರಕರಣಗಳು (Hit and Run) ಹೆಚ್ಚುತ್ತಿರುವ ನಡುವೆಯೇ, ಕೆಆರ್ ಪುರಂ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಭಟ್ಟರಹಳ್ಳಿ ಸಿಗ್ನಲ್ ಬಳಿ ಕಾರು ಡಿಕ್ಕಿಯಾಗಿ ಡೆಲಿವರಿ ಬಾಯ್ ಸಾವನ್ನಪ್ಪಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಮೃತ ವ್ಯಕ್ತಿಯನ್ನು ನೇಪಾಳ ಮೂಲದ ಸುರೇಂದರ್ ಬಹದ್ದೂರ್ (38) ಎಂದು ಗುರುತಿಸಲಾಗಿದೆ. ಕಳೆದ ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದ ಅವರು, ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ದಿನನಿತ್ಯದಂತೆ ಡೆಲಿವರಿ ನೀಡಲು ಹೊರಟಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಅಪಘಾತದ ವಿವರ:

ನೆನ್ನೆ ಬೆಳಗಿನ ಜಾವ ಸುಮಾರು 3:30ರ ವೇಳೆಗೆ, ಸುರೇಂದರ್ ಸ್ಕೂಟಿಯಲ್ಲಿ ಸಾಗುತ್ತಿದ್ದಾಗ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ಡಿಕ್ಕಿಯ ತೀವ್ರತೆಗೆ ಸುರೇಂದರ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಹಿಟ್ & ರನ್ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕಾರು ಹಾಗೂ ಚಾಲಕನ ಪತ್ತೆಗೆ ಸಹಕಾರಿಯಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಆರ್ ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಕಾರು ಚಾಲಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

English Summary▼

TRENDING ARTICLES1 / 5

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories