ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ವಿಶೇಷವಾಗಿ ಜಾರಿಗೆ ತಂದಿರುವ ಯೋಜನೆ ಗೃಹಲಕ್ಷ್ಮಿ ಯೋಜನೆ (Gruha Lakshmi Yojana) ಆಗಿದೆ. ಈ ಯೋಜನೆ ಶುರುವಾಗಿ 1 ವರ್ಷ ಆಗಿದೆ, ಆದರೆ ಕಳೆದ 3 ತಿಂಗಳಿನಿಂದ ಈ ಯೋಜನೆಯ ಹಣ ಮಹಿಳೆಯರ ಖಾತೆಗೆ ಜಮೆ ಆಗಿಲ್ಲ ಎನ್ನುವ ಕಾರಣಕ್ಕೆ ಗೃಹಲಕ್ಷ್ಮೀ ಫಲಾನುಭವಿಗಳು ಆತಂಕಕ್ಕೆ ಒಳಗಾಗಿದ್ದರು.

ಆದರೆ ಇದೀಗ ಅವರಿಗೆಲ್ಲಾ ಗುಡ್ ನ್ಯೂಸ್ ಸಿಕ್ಕಿದ್ದು, ಪೆಂಡಿಂಗ್ ಇರುವ 11 ಮತ್ತು 12ನೇ ಕಂತಿನ ಹಣ ಮೊದಲ ಹಂತದಲ್ಲಿ ಈ ಜಿಲ್ಲೆಯ ಮಹಿಳೆಯರಿಗೆ ತಲುಪಿದೆ..

Gruha Lakshmi pending money is also deposited for the women of this district

ಜೂನ್ ಮತ್ತು ಜುಲೈ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಕೂಡ ಮಹಿಳೆಯರನ್ನು ತಲುಪಿಲ್ಲ ಎಂದು ಬಹಳಷ್ಟು ಮಹಿಳೆಯರು ಸರ್ಕಾರದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು.

ಆದರೆ ಆ ವೇಳೆ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣದಿಂದ ಮಹಿಳೆಯರಿಗೆ ಈ ಒಂದು ಯೋಜನೆಯ ಹಣ ಇನ್ನು ಕೂಡ ಬಂದಿರಲಿಲ್ಲ. ಅದರ ಜೊತೆಗೆ ತಾಂತ್ರಿಕ ದೋಷಗಳು ಕೂಡ ಇದೆ ಎಂದು ಸರ್ಕಾರವೇ ತಿಳಿಸಿತ್ತು. ಹಾಗಾಗಿ 2 ತಿಂಗಳ ಹಣ ಪೆಂಡಿಂಗ್ ಉಳಿದಿತ್ತು.

ಭಾರೀ ಬೇಡಿಕೆ ಸೃಷ್ಟಿಸಿದೆ ಬಿಪಿಎಲ್ ಕಾರ್ಡ್! ಯಾವ ಜಿಲ್ಲೆಯಲ್ಲಿ ಎಷ್ಟು ಅರ್ಜಿ ಸಲ್ಲಿಕೆ ಆಗಿದೆ ಗೊತ್ತಾ?

ಆದರೆ ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮೀ ಯೋಜನೆಯ ಪೆಂಡಿಂಗ್ ಹಣ ಬಿಡುಗಡೆ ಆಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಆಂದೋಲನ ಕಾರ್ಯಕ್ರಮದ ವೇಳೆ ಈ ಬಗ್ಗೆ ಅವರು ಮಾತನಾಡಿದ್ದು, ಸರ್ಕಾರದ ಕಡೆಯಿಂದ ಹಣ ಮಂಜೂರಾಗಿದ್ದು, ಹಂತ ಹಂತವಾಗಿ ಎಲ್ಲಾ ಮಹಿಳೆಯರಿಗೆ ಪೆಂಡಿಂಗ್ ಹಣ ಒಂದೇ ಸಾರಿ 4000 ರೂಪಾಯಿ ಜಮೆ ಆಗುತ್ತದೆ ಎಂದು ತಿಳಿಸಿದ್ದಾರೆ. ಈಗಾಗಲೇ 26.65 ಲಕ್ಷ ರೂಪಾಯಿ ಬಿಡುಗಡೆ ಆಗಿದೆ.

ಮೊದಲ ಹಂತದಲ್ಲಿ ಪ್ರಸ್ತುತ ಬೀದರ್, ಬೆಳಗಾವಿ, ಕಲಬುರಗಿ, ಬಳ್ಳಾರಿ, ವಿಜಯಪುರ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಈ ಜಿಲ್ಲೆಯ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆ ಆಗಿದ್ದು, ಈ ಮಹಿಳೆಯರು ಸ್ಟೇಟಸ್ ಚೆಕ್ ಮಾಡುವ ಮೂಲಕ ತಮಗೆ ಹಣ ಬಂದಿದ್ಯಾ ಎಂದು ಚೆಕ್ ಮಾಡಿಕೊಳ್ಳಬಹುದು. ಇನ್ನುಳಿದ ಜಿಲ್ಲೆಯ ಮಹಿಳೆಯರಿಗೆ ಕೂಡ ಶೀಘ್ರದಲ್ಲೇ ಗೃಹಲಕ್ಷ್ಮಿ ಯೋಜನೆಯ ಹಣ ಲಭಿಸುತ್ತದೆ.

ಗೃಹಜ್ಯೋತಿ ಫ್ರೀ ಕರೆಂಟ್ ಬೇಕಾದ್ರೆ ಮೊದಲು ಡಿ-ಲಿಂಕ್ ಮಾಡಿಸಿ ಮತ್ತೆ ಅರ್ಜಿ ಸಲ್ಲಿಸಿ! ಬಿಗ್ ಅಪ್ಡೇಟ್

ಇನ್ನು ನಿಮ್ಮ ಖಾತೆಗೆ (Bank Account) ಗೃಹಲಕ್ಷ್ಮಿ ಯೋಜನೆಯ ಹಣ ಬಂದಿದ್ಯಾ ಎಂದು ಚೆಕ್ ಮಾಡುವುದಕ್ಕೆ ನಿಮ್ಮ ಬ್ಯಾಂಕ್ ಸ್ಟೇಟ್ಮೆಂಟ್ (Bank Statement) ಪಡೆಯಿರಿ, ಈ ಮೂಲಕ ನಿಮಗೆ ಹಣ ಬಂದಿದ್ಯಾ ಎಂದು ಗೊತ್ತಾಗುತ್ತದೆ. ಅಥವಾ ಸ್ಟೇಟಸ್ ಚೆಕ್ ಮಾಡುವುದಕ್ಕೆ ಮತ್ತೊಂದು ವಿಧಾನ ಕೂಡ ಇದ್ದು, ಗೂಗಲ್ ಪ್ಲೇ ಸ್ಟೋರ್ ಮೂಲಕ ಡಿಬಿಟಿ ಕರ್ನಾಟಕ ಆಪ್ ಡೌನ್ಲೋಡ್ ಮಾಡಿ, ಆಧಾರ್ ಕಾರ್ಡ್ ಬಳಸಿ ಲಾಗಿನ್ ಆಗುವ ಮೂಲಕ ಡಿಬಿಟಿ ಸ್ಟೇಟಸ್ ಚೆಕ್ ಮಾಡಬಹುದು.

Deposit of Gruha Lakshmi Yojana pending money for the women of this district